×
Ad

ಜಗತ್ತಿನಲ್ಲಿ ಇರುವವರಿಗೆಲ್ಲ ಆಶ್ರಯ ಕೊಡಲು ಭಾರತವು ಧರ್ಮ ಛತ್ರವಲ್ಲ: ಸುಪ್ರೀಂ ಕೋರ್ಟ್

Update: 2025-05-19 22:31 IST

Photo credit: PTI

ಹೊಸದಿಲ್ಲಿ: ಜಗತ್ತಿನಲ್ಲಿರುವ ನಿರಾಶ್ರಿತರಿಗೆ ಆಶ್ರಯ ನೀಡಲು ಭಾರತವು ಧರ್ಮ ಛತ್ರ ಅಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಶ್ರೀಲಂಕಾದ ಪ್ರಜೆಯೊಬ್ಬರು ಆಶ್ರಯ ಕೋರಿ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯವು ಈ ಹೇಳಿಕೆ ನೀಡಿದೆ. ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠವು ಅರ್ಜಿಯನ್ನು ತಳ್ಳಿ ಹಾಕಿತು.

ಶ್ರೀಲಂಕಾ ಪ್ರಜೆಯೊಬ್ಬನ್ನು ಈ ಹಿಂದೆ ಶ್ರೀಲಂಕಾದಲ್ಲಿ ಪ್ರಬಲವಾಗಿದ್ದ ಭಯೋತ್ಪಾದಕ ಸಂಘಟನೆಯಾದ ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಳಂ ಎಲ್ಟಿಟಿಇಗೆ ಸಂಬಂಧಿಸಿದ ಶಂಕೆಯ ಮೇಲೆ 2015 ರಲ್ಲಿ ಬಂಧಿಸಲಾಗಿತ್ತು.

2018ರಲ್ಲಿ, ವಿಚಾರಣಾ ನ್ಯಾಯಾಲಯ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಅವರನ್ನು ದೋಷಿ ಎಂದು ತೀರ್ಪು ನೀಡಿ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. 2022 ರಲ್ಲಿ, ಮದ್ರಾಸ್ ಹೈಕೋರ್ಟ್ ಶ್ರೀಲಂಕಾ ಪ್ರಜೆಯ ಶಿಕ್ಷೆ ಮುಗಿದ ತಕ್ಷಣ ಗಡಿಪಾರು ಮಾಡಬೇಕು. ಅಲ್ಲಿಯ ವರೆಗೆ ನಿರಾಶ್ರಿತರ ಶಿಬಿರದಲ್ಲಿ ಇರರುವಂತೆ ಆದೇಶ ನೀಡಿತ್ತು.

ಶ್ರೀಲಂಕಾ ಪ್ರಜೆಯ ಪತ್ನಿ ಮತ್ತು ಮಕ್ಕಳು ಭಾರತದಲ್ಲಿ ನೆಲೆಸಿದ್ದಾರೆ. ಅವರು ಸುಮಾರು ಮೂರು ವರ್ಷಗಳಿಂದ ಬಂಧನದಲ್ಲಿದ್ದಾರೆ. ಅವರ ಗಡಿಪಾರು ಪ್ರಕ್ರಿಯೆ ಪ್ರಾರಂಭವಾಗಿಲ್ಲ ಎಂದು ಅವರು ಹೇಳಿದರು. ಈಗ ನಾನು ಶ್ರೀಲಂಕಾಕ್ಕೆ ಹೋದರೆ ಜೀವಕ್ಕೆ ಅಪಾಯವಿದೆ ಎಂದು ಅವರು ನ್ಯಾಯಾಲಯಕ್ಕೆ ಹೇಳಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News