ರಾಮಸೇತುವನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸುವಂತೆ ಅರ್ಜಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
Update: 2025-08-29 17:00 IST
ರಾಮಸೇತು | PC : X
ಹೊಸದಿಲ್ಲಿ: ರಾಮಸೇತುವನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸುವಂತೆ ಕೋರಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ಸರಕಾರದ ತ್ವರಿತ ನಿರ್ಧಾರವನ್ನು ಕೋರಿ ಸಲ್ಲಿಸಿದ ಹೊಸ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು, ನೋಟಿಸ್ಗೆ ಉತ್ತರಿಸಲು ಕೇಂದ್ರಕ್ಕೆ ನಾಲ್ಕು ವಾರಗಳ ಕಾಲಾವಕಾಶವನ್ನು ನೀಡಿದೆ ಎಂದು Live Law ವರದಿ ಮಾಡಿದೆ.
'ರಾಮ ಸೇತು'ವನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ರಾಜ್ಯಸಭಾ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ ಅರ್ಜಿ ಸಲ್ಲಿಸಿದ್ದರು.