×
Ad

ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ರದ್ದು: ಸುಪ್ರೀಂ ಕೋರ್ಟ್ ತೀರ್ಪುನ್ನು ಸ್ವಾಗತಿಸಿದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

Update: 2025-12-29 21:10 IST

ಕುಲದೀಪ್ ಸಿಂಗ್ ಸೆಂಗಾರ್‌ | Photo Credit : PTI 

ಹೊಸದಿಲ್ಲಿ, ಡಿ. 29: ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ರದ್ದುಗೊಳಿಸಿ ದಿಲ್ಲಿ ಉಚ್ಚ ನ್ಯಾಯಾಲಯ ನೀಡಿದ ಆದೇಶಕ್ಕೆ ತಡೆ ವಿಧಿಸಿದ ಸುಪ್ರೀಂ ಕೋರ್ಟ್‌ನ ನಿರ್ಧಾರವನ್ನು ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಸೋಮವಾರ ಸ್ವಾಗತಿಸಿದ್ದಾರೆ.

ಆತನನ್ನು ನೇಣಿಗೆ ಹಾಕುವವರೆಗೆ ಕಾನೂನು ಹೋರಾಟ ಮುಂದುವರೆಸುವುದಾಗಿ ಅವರು ಪ್ರತಿಜ್ಞೆ ಮಾಡಿದ್ದಾರೆ.

‘‘ಈ ನಿರ್ಧಾರದಿಂದ ನನಗೆ ಅತೀವ ಸಂತಸವಾಗಿದೆ. ನನಗೆ ಸುಪ್ರೀಂ ಕೋರ್ಟ್‌ನಿಂದ ನ್ಯಾಯ ದೊರೆತಿದೆ. ನಾನು ಆರಂಭದಿಂದಲೂ ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿದ್ದೇನೆ’’ ಎಂದು ಅವರು ಹೇಳಿದ್ದಾರೆ.

‘‘ನಾನು ನ್ಯಾಯಾಲಯದ ವಿರುದ್ಧ ಯಾವುದೇ ರೀತಿಯ ಆರೋಪ ಮಾಡುವುದಿಲ್ಲ. ನನಗೆ ಎಲ್ಲಾ ನ್ಯಾಯಾಲಯಗಳ ಬಗ್ಗೆ ನಂಬಿಕೆ ಇದೆ. ಆದರೆ, ಸುಪ್ರೀಂ ಕೋರ್ಟ್ ನನಗೆ ನ್ಯಾಯ ನೀಡಿದೆ’’ ಎಂದು ಅವರು ಹೇಳಿದ್ದಾರೆ.

‘‘ಆತನನ್ನು ನೇಣಿಗೆ ಹಾಕುವವರೆಗೆ ನಾನು ವಿರಮಿಸಲಾರೆ. ನಾನು ಹೋರಾಟ ಮುಂದುವರಿಸಲಿದ್ದೇನೆ. ಆಗ ಮಾತ್ರ ನನ್ನ ಕುಟುಂಬ ಹಾಗೂ ನನಗೆ ನ್ಯಾಯ ದೊರೆಯುತ್ತದೆ. ನಾವು ಇಂದು ಕೂಡ ಬೆದರಿಕೆ ಸ್ವೀಕರಿಸಿದ್ದೇವೆ’’ ಎಂದು ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News