ಮುಕುಲ್ ರಾಯ್‌ರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಕಲ್ಕತ್ತಾ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ
ಬಿಜೆಪಿಯಿಂದ ತೃಣಮೂಲ ಕಾಂಗ್ರೆಸ್‌ಗೆ ಪಕ್ಷಾಂತರಗೊಂಡಿದ್ದ ಮುಕುಲ್ ರಾಯ್
ಮುಕುಲ್ ರಾಯ್ | Photo Credit : PTI
ಕೋಲ್ಕತಾ, ಜ. 16: ಬಿಜೆಪಿಯಿಂದ ತೃಣಮೂಲ ಕಾಂಗ್ರೆಸ್‌ಗೆ ಪಕ್ಷಾಂತರಗೊಂಡ ಬಳಿಕ ಮುಕುಲ್ ರಾಯ್ ಅವರನ್ನು ಪಶ್ಚಿಮಬಂಗಾಳ ವಿಧಾನ ಸಭೆಯ ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಕಲ್ಕತ್ತಾ ಉಚ್ಚ ನ್ಯಾಯಾಲಯ ನೀಡಿದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಕಲ್ಕತ್ತಾ ಉಚ್ಚ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಮುಕುಲ್ ರಾಯ್ ಅವರ ಪುತ್ರ ಶುಭ್ರಾಂಶು ರಾಯ್ ಅವರು ಸಲ್ಲಿಸಿದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿ ಜಯಮಾಲ್ಯ ಬಾಗ್ಚಿ ಅವರ ಪೀಠ ಶುಕ್ರವಾರ ವಿಚಾರಣೆ ನಡೆಸಿತು. ಅಲ್ಲದೆ ಮಧ್ಯಂತರ ಆದೇಶ ಹಾಗೂ ಪ್ರತಿಪಾದಿಗಳಿಗೆ ನೋಟಿಸ್ ನೀಡಿದೆ.
ಉಚ್ಚ ನ್ಯಾಯಾಲಯದ ಆದೇಶವನ್ನು ಸದ್ಯ ಜಾರಿಗೊಳಿಸುವುದಿಲ್ಲ ಎಂದು ಪೀಠವು ಹೇಳಿದೆ.
2021ರ ಮೇಯಲ್ಲಿ ನಡೆದ ಚುನಾವಣೆಯಲ್ಲಿ ಕೃಷ್ಣನಗರ ಉತ್ತರ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಫರ್ದಿಸಿದ್ದ ಮುಕುಲ್ ರಾಯ್ ಅವರು ವಿಧಾನ ಸಭೆಗೆ ಆಯ್ಕೆಯಾಗಿದ್ದರು. ಆದರೆ, ಅನಂತರ ಅವರು ಜೂನ್‌ನಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದರು.