×
Ad

ಅವಧಿ ಮೀರಿ ವಾಸ್ತವ್ಯ: ಮಾಜಿ ಸಿಜೆಐ ಡಿ.ವೈ.ಚಂದ್ರಚೂಡ್‌ ಅವರಿಗೆ ಸರಕಾರಿ ಬಂಗಲೆ ಖಾಲಿ ಮಾಡುವಂತೆ ಸೂಚಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪತ್ರ

Update: 2025-07-06 11:31 IST

ಮಾಜಿ ಸಿಜೆಐ ಡಿ.ವೈ.ಚಂದ್ರಚೂಡ್‌ (Photo: PTI)

ಹೊಸದಿಲ್ಲಿ : ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಮುಖ್ಯ ನ್ಯಾಯಮೂರ್ತಿಗಳ ಅಧಿಕೃತ ನಿವಾಸದಲ್ಲಿ ಅವಧಿ ಮೀರಿ ವಾಸಿಸುತ್ತಿರುವುದನ್ನು ಗಮನಿಸಿದ ಸುಪ್ರೀಂ ಕೋರ್ಟ್ ಆಡಳಿತವು ಕೇಂದ್ರ ಸರಕಾರಕ್ಕೆ ಪತ್ರ ಬರೆದು, ಬಂಗಲೆಯನ್ನು ಖಾಲಿ ಮಾಡಲು ಸೂಚಿಸುವಂತೆ ಒತ್ತಾಯಿಸಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತುತ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಸೇರಿದಂತೆ 33 ನ್ಯಾಯಾಧೀಶರಿದ್ದಾರೆ.

ಸುಪ್ರೀಂ ಕೋರ್ಟ್‌ನ ನಾಲ್ವರು ನ್ಯಾಯಾಧೀಶರಿಗೆ ಇನ್ನೂ ಸರಕಾರಿ ವಸತಿ ಹಂಚಿಕೆಯಾಗಿಲ್ಲ. ಅವರಲ್ಲಿ ಮೂವರು ಸುಪ್ರೀಂ ಕೋರ್ಟ್‌ನ ಟ್ರಾನ್ಸಿಟ್ ಅಪಾರ್ಟ್ಮೆಂಟ್‌ಗಳಲ್ಲಿ ವಾಸಿಸುತ್ತಿದ್ದರೆ. ಓರ್ವರು ರಾಜ್ಯ ಅತಿಥಿ ಗೃಹದಲ್ಲಿ ವಾಸಿಸುತ್ತಿದ್ದಾರೆ. ಆದ್ದರಿಂದ ಸುಪ್ರೀಂ ಕೋರ್ಟ್‌ಗೆ ಮುಖ್ಯ ನ್ಯಾಯಮೂರ್ತಿಗಳ ಅಧಿಕೃತ ನಿವಾಸವಾದ ಕೃಷ್ಣ ಮೆನನ್ ಮಾರ್ಗ ಬಂಗಲೆಯ ತುರ್ತು ಅವಶ್ಯಕತೆಯಿದೆ.

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ 2024ರ ನವೆಂಬರ್ 10ರಂದು ನಿವೃತ್ತರಾಗಿದ್ದರು. ಸರಕಾರಿ ನಿಯಮಗಳ ಪ್ರಕಾರ, ಸೇವೆಯಲ್ಲಿರುವ ಮುಖ್ಯ ನ್ಯಾಯಮೂರ್ತಿಯೊಬ್ಬರು ತಮ್ಮ ಅಧಿಕಾರಾವಧಿಯಲ್ಲಿ ಟೈಪ್ VIII ಬಂಗಲೆಯಲ್ಲಿ ವಾಸಿಸಲು ಅರ್ಹರಾಗಿರುತ್ತಾರೆ. ನಿವೃತ್ತಿಯ ನಂತರ, ಅವರು ಆರು ತಿಂಗಳವರೆಗೆ ಬಾಡಿಗೆ ರಹಿತವಾಗಿ ಟೈಪ್ VII ಸರಕಾರಿ ಬಂಗಲೆಯಲ್ಲಿ ವಾಸಿಸಬಹುದು. ಆದರೆ, ನ್ಯಾಯಮೂರ್ತಿ ಚಂದ್ರಚೂಡ್ ಅವರು ನಿವೃತ್ತಿಯ ನಂತರವೂ ಮುಖ್ಯ ನ್ಯಾಯಮೂರ್ತಿಯಾಗಿದ್ದ ವೇಳೆ ಹಂಚಿಕೆಯಾದ ಟೈಪ್ VIII ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ.

ಜುಲೈ 1 ರಂದು ಸುಪ್ರೀಂ ಕೋರ್ಟ್ ಆಡಳಿತವು ಈ ಕುರಿತು ಕೇಂದ್ರ ವಸತಿ ಸಚಿವಾಲಯಕ್ಕೆ ಬರೆದ ಪತ್ರದಲ್ಲಿ ಬಂಗಲೆಯನ್ನು ತಕ್ಷಣವೇ ತೆರವುಗೊಳಿಸುವಂತೆ ಒತ್ತಾಯಿಸಿದೆ. ಮಾನ್ಯ ಮಾಜಿ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರಿಂದ ಕೃಷ್ಣ ಮೆನನ್ ಮಾರ್ಗದ 5ನೇ ಬಂಗಲೆಯನ್ನು ಯಾವುದೇ ವಿಳಂಬವಿಲ್ಲದೆ ಸ್ವಾಧೀನಪಡಿಸಿಕೊಳ್ಳಲು ನಾವು ನಿಮ್ಮನ್ನು ವಿನಂತಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News