×
Ad

ಕೇಂದ್ರ ಸರಕಾರದ ಮನವಿ ಬಳಿಕ ನಿರ್ಧಾರ ಬದಲಿಸಿದ ಸುಪ್ರೀಂ ಕೋರ್ಟ್ : ನ್ಯಾಯಮೂರ್ತಿ ಅತುಲ್ ಶ್ರೀಧರನ್ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ

Update: 2025-10-16 13:16 IST

Photo credit: PTI

ಭೋಪಾಲ್ : ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಾಧೀಶ ಅತುಲ್ ಶ್ರೀಧರನ್ ಅವರನ್ನು ಛತ್ತೀಸ್‌ಗಡ ಹೈಕೋರ್ಟ್‌ಗೆ ವರ್ಗಾಯಿಸಲು ಶಿಫಾರಸು ಮಾಡಿದ್ದ ಹಿಂದಿನ ಪ್ರಸ್ತಾವನೆಯನ್ನು ಮರುಪರಿಶೀಲಿಸುವಂತೆ ಕೇಂದ್ರ ಸರಕಾರ ಮಾಡಿದ ಮನವಿಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ಶಿಫಾರಸು ಮಾಡಿದೆ.

ಅಕ್ಟೋಬರ್ 14 ರಂದು ನಡೆದ ಸಭೆಯಲ್ಲಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಕೊಲಿಜಿಯಂ ಈ ನಿರ್ಧಾರ ತೆಗೆದುಕೊಂಡಿದೆ.

“ಮರುಪರಿಶೀಲನೆ ಕುರಿತು ಸರಕಾರದ ಕೋರಿಕೆಯ ಮೇರೆಗೆ 2025ರ ಅಕ್ಟೋಬರ್ 14ರಂದು ನಡೆದ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಭೆಯಲ್ಲಿ ಮಧ್ಯಪ್ರದೇಶದ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಅತುಲ್ ಶ್ರೀಧರನ್ ಅವರನ್ನು ಛತ್ತೀಸ್‌ಗಡ ಹೈಕೋರ್ಟ್‌ ಬದಲಾಗಿ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ಶಿಫಾರಸು ಮಾಡಲು ನಿರ್ಧರಿಸಿದೆ” ಎಂದು ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.

ಆಗಸ್ಟ್‌ನಲ್ಲಿ ನ್ಯಾಯಮೂರ್ತಿ ಶ್ರೀಧರನ್ ಅವರನ್ನು ಛತ್ತೀಸ್‌ಗಡ ಹೈಕೋರ್ಟ್‌ಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿತ್ತು. ಕೇಂದ್ರ ಸರಕಾರ ಈ ಪ್ರಸ್ತಾವನೆಯನ್ನು ಮರುಪರಿಶೀಲಿಸುವಂತೆ ಕೋರಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News