×
Ad

ವಿಧಿ 370 ರದ್ದತಿ ಎತ್ತಿಹಿಡಿದ ತೀರ್ಪು ಮರುಪರಿಶೀಲನೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

Update: 2024-05-22 10:39 IST

ಸುಪ್ರೀಂ ಕೋರ್ಟ್‌ | PC: PTI 

ಹೊಸದಿಲ್ಲಿ: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸಿದ್ದ ಸಂವಿಧಾನದ ವಿಧಿ 370 ಅನ್ನು ರದ್ದುಗೊಳಿಸಿದ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದು ಕಳೆದ ವರ್ಷದ ಡಿಸೆಂಬರ್‌ನಲ್ಲಿ ತಾನು ನೀಡಿದ ತೀರ್ಪನ್ನು ಮರುಪರಿಶೀಲಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ಮರುಪರಿಶೀಲಿಸಲು ಯಾವುದೇ ಕಾರಣವಿಲ್ಲ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ, ಬಿ ಆರ್‌ ಗವಾಯಿ, ಸೂರ್ಯಕಾಂತ್‌ ಮತ್ತು ಎ ಎಸ್‌ ಬೋಪಣ್ಣ ಅವರ ಪೀಠವು ಅರ್ಜಿಯನ್ನು ವಜಾಗೊಳಿಸಿ ಮೇ 1ರಂದು ಆದೇಶ ಹೊರಡಿಸಿದೆ. ಈ ತೀರ್ಪನ್ನು ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಮಂಗಳವಾರ ಪ್ರಕಟಿಸಲಾಗಿದೆ.

ಮರುಪರಿಶೀಲನಾ ಅರ್ಜಿಯನ್ನು ಅವಾಮಿ ನ್ಯಾಷನಲ್‌ ಕಾನ್ಫರೆನ್ಸ್‌ ಸಲ್ಲಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News