×
Ad

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಮೋಹನ್ ನಾಯಕ್ ಜಾಮೀನು ರದ್ದುಗೊಳಿಸಲು ಸುಪ್ರೀಂ ನಕಾರ

Update: 2024-08-22 12:01 IST

ಗೌರಿ ಲಂಕೇಶ್ 

ಹೊಸದಿಲ್ಲಿ: ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಕೊಲೆ ಆರೋಪಿ ಮೋಹನ್ ನಾಯಕ್‌ಗೆ ನೀಡಲಾಗಿದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠವು ಈ ಸಂಬಂಧ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಎತ್ತಿಹಿಡಿದಿದೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಪೈಕಿ ಮೋಹನ್ ನಾಯಕ್‌ಗೆ ಜಾಮೀನು ನೀಡಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಸಲ್ಲಿಸಲಾದ ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿದೆ. ಕರ್ನಾಟಕ ಹೈಕೋರ್ಟ್ 2023 ರ ಡಿಸೆಂಬರ್‌ನಲ್ಲಿ ನಾಯಕ್‌ಗೆ ಜಾಮೀನು ನೀಡಿತ್ತು.

2017ರಲ್ಲಿ ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಡಿಸೆಂಬರ್ 7, 2023 ರಂದು, ಕರ್ನಾಟಕ ಹೈಕೋರ್ಟ್ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಮೋಹನ್ ನಾಯಕ್‌ಗೆ ಜಾಮೀನು ನೀಡಿತ್ತು. ಈತ ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ವ್ಯಕ್ತಿ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News