×
Ad

ಮಥುರಾದ ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಸುಪ್ರೀಂ ಕೋರ್ಟ್

Update: 2025-01-22 13:39 IST

Photo credit: PTI

ಹೊಸದಿಲ್ಲಿ: ಮಥುರಾದ ಶಾಹಿ ಈದ್ಗಾ ಮಸೀದಿ ಸಂಕೀರ್ಣವನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶದ ಮೇಲಿನ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಬುಧವಾರ ವಿಸ್ತರಿಸಿದೆ.

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ.ವಿಶ್ವನಾಥನ್ ಅವರನ್ನೊಳಗೊಂಡ ಪೀಠವು, ಮಸೀದಿ ಸಂಕೀರ್ಣದಲ್ಲಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆ ವಿರುದ್ಧದ 'ಶಾಹಿ ಮಸೀದಿ ಈದ್ಗಾ ಟ್ರಸ್ಟ್ ನಿರ್ವಹಣಾ ಸಮಿತಿ'ಯ ಅರ್ಜಿ ವಿಚಾರಣೆ ನಡೆಸಿ ಈ ಆದೇಶವನ್ನು ನೀಡಿದೆ.

ಅಲಹಾಬಾದ್ ಹೈಕೋರ್ಟ್ ಶಾಹಿ ಈದ್ಗಾ ಮಸೀದಿ ಸಂಕೀರ್ಣದಲ್ಲಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆಗೆ ಅನುಮತಿ ನೀಡಿತ್ತು. ಹೈಕೋರ್ಟ್ ನ ಡಿಸೆಂಬರ್ 14, 2023ರ ಈ ಆದೇಶಕ್ಕೆ ಕಳೆದ ಜನವರಿ 16ರಂದು ಸುಪ್ರೀಂ ಕೋರ್ಟ್ ತಡೆ ನೀಡಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News