×
Ad

ಹಣ ಅಕ್ರಮ ವರ್ಗಾವಣೆ ಪ್ರಕರಣ: ಶಾಸಕ ಅಬ್ಬಾಸ್ ಅನ್ಸಾರಿಗೆ ಸುಪ್ರೀಂ ಕೋರ್ಟ್ ಜಾಮೀನು

Update: 2024-10-18 20:49 IST

ಅಬ್ಬಾಸ್ ಅನ್ಸಾರಿ | PC : X

ಹೊಸದಿಲ್ಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಶಾಸಕ ಅಬ್ಬಾಸ್ ಅನ್ಸಾರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.

ಮಾಜಿ ಶಾಸಕ ದಿವಂಗತ ಮುಖ್ತರ್ ಅನ್ಸಾರಿ ಅವರ ಪುತ್ರ ಅಬ್ಬಾಸ್ ಅನ್ಸಾರಿ 2022 ನವೆಂಬರ್‌ನಿಂದ ಕಾರಾಗೃಹದಲ್ಲಿದ್ದಾರೆ. ಅಬ್ಬಾಸ್ ಅನ್ಸಾರಿ ಅವರ ತಂದೆ ತಿಂಗಳುಗಳ ಹಿಂದೆ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಹಾಗೂ ಪಂಕಜ್ ಮಿತ್ತಲ್ ಅವರನ್ನು ಒಳಗೊಂಡ ಪೀಠ ಅಬ್ಬಾಸ್ ಅನ್ಸಾರಿ ಅವರಿಗೆ ಜಾಮೀನು ನೀಡಿದೆ.

ಜಾಮೀನು ನಿರಾಕರಿಸಿ ಅಲಹಾಬಾದ್ ಉಚ್ಚ ನ್ಯಾಯಾಲಯ ನೀಡಿದ ಆದೇಶವನ್ನು ಪ್ರಶ್ನಿಸಿ ಅಬ್ಬಾಸ್ ಅನ್ಸಾರಿ ಅವರು ಸಲ್ಲಿಸಿದ ಮೇಲ್ಮನವಿಗೆ ಪ್ರತಿಕ್ರಿಯೆ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಆಗಸ್ಟ್ 14ರಂದು ಜಾರಿ ನಿರ್ದೇಶನಾಲಯ (ಈ.ಡಿ.)ಕ್ಕೆ ನೋಟಿಸು ಜಾರಿ ಮಾಡಿತ್ತು.

ಅನ್ಸಾರಿ ಅವರು ಪ್ರಸಕ್ತ ಕಸ್ಗಂಜ್ ಕಾರಾಗೃಹದಲ್ಲಿ ಇದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News