ಅಶೋಕ ವಿವಿಯ ಪ್ರಾಧ್ಯಾಪಕ ಅಲಿ ಖಾನ್ ಗೆ ಸುಪ್ರಿಂ ಕೋರ್ಟ್ ಮಧ್ಯಂತರ ಜಾಮೀನು
Update: 2025-05-21 12:33 IST
ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ (credit: ashoka.edu.in)
ಹೊಸದಿಲ್ಲಿ: ʼಆಪರೇಷನ್ ಸಿಂದೂರ್ʼ ಬಗ್ಗೆ ಮಾಡಿದ್ದ ಪೋಸ್ಟ್ ಗಾಗಿ ಬಂಧನಕ್ಕೊಳಗಾಗಿದ್ದ ಅಶೋಕ ವಿವಿ ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ಗೆ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ಜಾಮೀನು ನೀಡಿದೆ.
ಆಪರೇಷನ್ ಸಿಂದೂರ್ ಬಗ್ಗೆ ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ನೀಡಿದ ಹೇಳಿಕೆಗಳ ತನಿಖೆಗಾಗಿ ಸುಪ್ರೀಂ ಕೋರ್ಟ್ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿದೆ. ಅರ್ಜಿದಾರರು ಬಳಸಿದ ಕೆಲವು ಪದಗಳಿಗೆ ದ್ವಂದ್ವ ಅರ್ಥ ಇದೆ ಎಂದು ನ್ಯಾಯಾಲಯವು ಉಲ್ಲೇಖಿಸಿದೆ.