×
Ad

ಹೈಕೋರ್ಟ್ ನ್ಯಾಯಾಧೀಶರನ್ನು ವಿಚಾರಣೆಗೆ ಒಳಪಡಿಸುವ ಅಧಿಕಾರವಿದೆ ಎಂದ ಲೋಕಪಾಲ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Update: 2025-02-20 12:01 IST

ಹೊಸದಿಲ್ಲಿ : ಲೋಕಪಾಲ್ ಮತ್ತು ಲೋಕಾಯುಕ್ತ ಕಾಯಿದೆ- 2013ರ ಅಡಿಯಲ್ಲಿ ಹೈಕೋರ್ಟ್ ನ್ಯಾಯಾಧೀಶರನ್ನು ವಿಚಾರಣೆಗೆ ಒಳಪಡಿಸುವ ಅಧಿಕಾರವಿದೆ ಎಂದು ತೀರ್ಪು ನೀಡಿದ ಲೋಕಪಾಲ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ.

ಲೋಕಪಾಲ್ ಆದೇಶವನ್ನು ʼತುಂಬಾ ಗೊಂದಲʼದಿಂದ ಕೂಡಿದೆ ಎಂದ ಸುಪ್ರೀಂ ಕೋರ್ಟ್, ಈ ಕುರಿತು ಕೇಂದ್ರ ಸರಕಾರ ಮತ್ತು ಲೋಕಪಾಲ್ ರಿಜಿಸ್ಟ್ರಾರ್‌ಗೆ ನೋಟಿಸ್ ಜಾರಿ ಮಾಡಿದೆ.

ಹೈಕೋರ್ಟ್‌ನ ಹಾಲಿ ಇಬ್ಬರು ಹೆಚ್ಚುವರಿ ನ್ಯಾಯಾಧೀಶರ ವಿರುದ್ಧ ಸಲ್ಲಿಸಲಾದ ಎರಡು ದೂರುಗಳ ವಿಚಾರಣೆ ವೇಳೆ ಜನವರಿ 27ರಂದು ಲೋಕಪಾಲ್ ನೀಡಿದ ಆದೇಶದ ನಂತರ ಸುಪ್ರೀಂ ಕೋರ್ಟ್ ಈ ವಿಷಯವನ್ನು ಸ್ವಯಂಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಂಡಿದೆ.

ಇದಲ್ಲದೆ ಹೈಕೋರ್ಟ್ ನ್ಯಾಯಾಧೀಶರ ಹೆಸರನ್ನು ಬಹಿರಂಗಪಡಿಸದಂತೆ ದೂರುದಾರರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News