×
Ad

ಚುನಾವಣಾ ಅಧಿಕಾರಿಗಳ ನೇಮಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

Update: 2024-03-15 22:11 IST

ಸುಪ್ರೀಂ ಕೋರ್ಟ್ | Photo: PTI

ಹೊಸದಿಲ್ಲಿ : 2023ರ ಕಾಯ್ದೆ ಅಡಿಯಲ್ಲಿ ಜ್ಞಾನೇಶ್ ಕುಮಾರ್ ಹಾಗೂ ಸುಖ್ಬೀರ್ ಸಿಂಗ್ ಸಂಧು ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಿರುವುದಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಅಲ್ಲದೆ, ಮುಖ್ಯ ಚುನಾವಣಾ ಆಯುಕ್ತ ಹಾಗೂ ಇತರ ಚುನಾವಣಾ ಆಯುಕ್ತರ (ನೇಮಕ, ಸೇವಾ ಷರತ್ತು ಹಾಗೂ ಅಧಿಕಾರಾವಧಿ) ಕಾಯ್ದೆಗೆ ಕೂಡ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಸಾಮಾನ್ಯವಾಗಿ ಮಧ್ಯಂತರ ಆದೇಶದ ಮೂಲಕ ಈ ಆದೇಶಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠ ಹೇಳಿದೆ.

ಪ್ರಕರಣದ ಮುಂದಿನ ವಿಚಾರಣೆ ಮಾರ್ಚ್ 21ರಂದು ನಡೆಯಲಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News