ಭಾರತ-ಪಾಕಿಸ್ತಾನ ಏಷ್ಯಾ ಕಪ್ ಪಂದ್ಯ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್
Update: 2025-09-11 12:59 IST
ಸುಪ್ರೀಂ ಕೋರ್ಟ್
ಹೊಸದಿಲ್ಲಿ : ಭಾರತ-ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಪಂದ್ಯ ರದ್ದು ಕೋರಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.
ಏಷ್ಯಾ ಕಪ್‌ನ ಭಾಗವಾಗಿ ಸೆಪ್ಟೆಂಬರ್ 14 ರಂದು ದುಬೈನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ಟಿ20 ಕ್ರಿಕೆಟ್ ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.
ಉರ್ವಶಿ ಜೈನ್ ನೇತೃತ್ವದ ನಾಲ್ವರು ಕಾನೂನು ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಜೆಕೆ ಮಹೇಶ್ವರಿ ಮತ್ತು ವಿಜಯ್ ಬಿಷ್ಣೋಯ್ ಅವರ ಪೀಠದ ಮುಂದೆ ಉಲ್ಲೇಖಿಸಲಾಯಿತು.
ಸೆಪ್ಟೆಂಬರ್ 14ರ ರವಿವಾರ ಪಂದ್ಯ ನಿಗದಿಯಾಗಿರುವುದರಿಂದ ಅರ್ಜಿದಾರರ ಪರ ವಕೀಲರು ಪ್ರಕರಣವನ್ನು ಶುಕ್ರವಾರ ವಿಚಾರಣೆಗೆ ಒಳಪಡಿಸುವಂತೆ ಕೋರಿದ್ದರು.