×
Ad

I-PAC ಕಚೇರಿ ಮೇಲೆ ದಾಳಿ | ಈಡಿ ಅಧಿಕಾರಿಗಳ ವಿರುದ್ಧದ ಎಫ್ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ: ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಪೊಲೀಸರಿಗೆ ನೋಟಿಸ್

Update: 2026-01-15 16:18 IST

ಮಮತಾ ಬ್ಯಾನರ್ಜಿ (Photo: PTI)

ಹೊಸದಿಲ್ಲಿ: I-PAC ಕಚೇರಿ ಮೇಲೆ ಈಡಿ ದಾಳಿಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧದ ಎಫ್ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಕುರಿತು ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಪೊಲೀಸರು ಮತ್ತು ಇತರರಿಗೆ ನೋಟಿಸ್ ನೀಡಿದೆ.

ಜನವರಿ 8ರಂದು ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ಕಚೇರಿ ಮತ್ತು ಸಂಸ್ಥೆಯ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಕೋಲ್ಕತ್ತಾದ ನಿವಾಸದ ಮೇಲೆ ದಾಳಿ ನಡೆಸಿದಾಗ ಅಡ್ಡಿಪಡಿಸಿದ್ದಾರೆಂದು ಈಡಿ ಅಧಿಕಾರಿಗಳು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ವೇಳೆ ಮಧ್ಯೆ ಪ್ರವೇಶಿಸಿ ತನಿಖೆಗೆ ಸಂಬಂಧಿಸಿದ "ಪ್ರಮುಖ" ಸಾಕ್ಷ್ಯಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.

ಈ ಬಗ್ಗೆ ಸುಪ್ರೀಂ ಕೋರ್ಟ್ ಬಂಗಾಳ ಸರಕಾರ, ಸಿಎಂ ಮಮತಾ ಬ್ಯಾನರ್ಜಿ, ಡಿಜಿಪಿ ರಾಜೀವ್ ಕುಮಾರ್ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.

ಐ-ಪಿಎಸಿ ಕಚೇರಿ ಮತ್ತು ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ದಾಳಿ ನಡೆಸಿದ ಈಡಿ ಅಧಿಕಾರಿಗಳ ವಿರುದ್ಧದ ಎಫ್ಐಆರ್ ಗೆ ಇದೇ ವೇಳೆ ನ್ಯಾಯಾಲಯ ತಡೆ ನೀಡಿದೆ.

ಐ-ಪಿಎಸಿ ಕಚೇರಿ ಮೇಲಿನ ದಾಳಿಯ ವೇಳಿನ ಸಿಸಿಟಿವಿ ದೃಶ್ಯಾವಳಿಗಳನ್ನು ರಕ್ಷಿಸುವಂತೆ ಪಶ್ಚಿಮ ಬಂಗಾಳ ಪೊಲೀಸರಿಗೆ ನ್ಯಾಯಾಲಯ ಇದೇ ವೇಳೆ ನಿರ್ದೇಶನ ನೀಡಿದೆ. ಈ ಕುರಿತು ಫೆಬ್ರವರಿ 3ರಂದು ಹೆಚ್ಚಿನ ವಿಚಾರಣೆ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News