×
Ad

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ | ಬಿಭವ್ ಕುಮಾರ್‌ಗೆ ನ್ಯಾಯಾಂಗ ಬಂಧನ

Update: 2024-05-24 22:00 IST

ಸ್ವಾತಿ ಮಲಿವಾಲ್ , ಬಿಭವ್ ಕುಮಾರ್‌ | PTI

ಹೊಸದಿಲ್ಲಿ, : ಆಪ್‌ನ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್‌ಗೆ ದಿಲ್ಲಿಯ ತೀಸ್ ಹಜಾರಿ ನ್ಯಾಯಾಲಯವು ಶುಕ್ರವಾರ ನಾಲ್ಕು ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ. ಕುಮಾರ್ ಅವರ ಪೋಲಿಸ್ ಕಸ್ಟಡಿ ಅವಧಿ ಅಂತ್ಯಗೊಂಡಿದ್ದರಿಂದ ಅವರನ್ನು ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗಿತ್ತು.

ಮೇ 13ರಂದು ತಾನು ಮುಖ್ಯಮಂತ್ರಿಗಳನ್ನು ಭೇಟಿಯಾಗಲು ಅವರ ನಿವಾಸಕ್ಕೆ ತೆರಳಿದ್ದಾಗ ಕುಮಾರ್ ತನ್ನ ಮೇಲೆ ಹಲ್ಲೆ ನಡೆಸಿದ್ದರು ಎಂದು ಮಲಿವಾಲ್ ಆರೋಪಿಸಿದ್ದಾರೆ.

ಆರೋಪವನ್ನು ತಳ್ಳಿಹಾಕಿರುವ ಆಪ್, ಮಲಿವಾಲ್ ಕೇಜ್ರಿವಾಲ್‌ರನ್ನು ಸಿಲುಕಿಸಲು ಬಿಜೆಪಿಯ ಸೂಚನೆಯಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಪ್ರತಿಪಾದಿಸಿದೆ.

ಮೇ 18ರಂದು ಕುಮಾರ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಐದು ದಿನಗಳ ಪೋಲಿಸ್ ಕಸ್ಟಡಿ ವಿಧಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News