×
Ad

2026ರ ತಮಿಳುನಾಡು ವಿಧಾನಸಭಾ ಚುನಾವಣೆ: ಮೆಗಾ ಮೈತ್ರಿಗೆ ಮುಂದಾದ ಎಐಎಡಿಎಂಕೆ

Update: 2025-02-17 17:10 IST

 ಎಡಪ್ಪಾಡಿ ಕೆ. ಪಳನಿಸ್ವಾಮಿ | PTI

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ನೇತೃತ್ವದಲ್ಲಿ ಬೃಹತ್ ಮೈತ್ರಿಕೂಟ ರಚನೆಯಾಗಲಿದೆ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಘೋಷಿಸಿದರು.

ವೆಲ್ಲೂರು ಜಿಲ್ಲೆಯಲ್ಲಿ ಪಕ್ಷದ ಯುವ ಮೋರ್ಚಾ ಆಯೋಜಿಸಿದ್ದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, “ಚುನಾವಣಾ ಮೈತ್ರಿ ಹಾಗೂ ಪಕ್ಷದ ಸಿದ್ಧಾಂತ ಎರಡೂ ವಿಭಿನ್ನ ಸಂಗತಿಗಳಾಗಿವೆ. ಮತ ವಿಭಜನೆಯನ್ನು ತಡೆದು, ಚುನಾವಣೆಯಲ್ಲಿ ಗೆಲುವು ಸಾಧಿಸಲು ಮೈತ್ರಿ ಮಾಡಿಕೊಳ್ಳಲಾಗುತ್ತದೆ” ಎಂದು ಹೇಳಿದರು.

“ಆಡಳಿತಾರೂಢ ಡಿಎಂಕೆ ಪಕ್ಷಕ್ಕೆ ಪ್ರಬಲ ಪೈಪೋಟಿ ನೀಡುವ ಮೂಲಕ ಚುನಾವಣೆಯಲ್ಲಿ ಗೆಲುವು ಸಾಧಿಸಲು ಈ ವಿಜಯದ ಮೈತ್ರಿ ಮಾಡಿಕೊಳ್ಳಲಿದ್ದೇವೆ” ಎಂದು ಅವರು ತಿಳಿಸಿದರು.

ಎಐಡಿಎಂಕೆಯೊಂದಿಗಿನ ಮೈತ್ರಿ ಸಾಧ್ಯತೆಯನ್ನು ನಟ, ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ನಿರಾಕರಿಸಿದ ನಂತರವೂ ಎಐಎಡಿಎಂಕೆ ಮುಖಂಡ ಪಳನಿಸ್ವಾಮಿ ನೀಡಿರುವ ಈ ಹೇಳಿಕೆಯು ಹಲವು ವದಂತಿಗಳಿಗೆ ಕಾರಣವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News