×
Ad

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ತಮಿಳುನಾಡು ಸಚಿವರ ವಿರುದ್ಧ ಎಫ್‌ಐಆರ್‌ ದಾಖಲು

Update: 2024-03-25 18:18 IST

ಅನಿತಾ ಆರ್ ರಾಧಾಕೃಷ್ಣನ್ (Photo: X/@ARROffice)

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡು ಸಚಿವ ಅನಿತಾ ಆರ್ ರಾಧಾಕೃಷ್ಣನ್ ವಿರುದ್ಧ ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ದ್ರಾವಿಡ ಮುನ್ನೇತ್ರ ಕಳಗಂ ಕಾರ್ಯಕರ್ತರ ಸಭೆಯಲ್ಲಿ ಸಚಿವ ರಾಧಾಕೃಷ್ಣನ್ ಅವರು ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಬಿಜೆಪಿ ನಾಯಕ ಚಿತ್ರಾಂಗದನ್ ಅವರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ ಲಕ್ಷ್ಮೀಪತಿ ಅವರಿಗೆ ದೂರು ನೀಡಿದ ಬಳಿಕ ತೂತುಕುಡಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ರಾಧಾಕೃಷ್ಣನ್ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿರುವ ಚಿತ್ರಾಂಗದನ್, ಸಚಿವರು ಹಾಗೂ ಸಭೆ ಆಯೋಜಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಪೊಲೀಸರು ರಾಧಾಕೃಷ್ಣನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 (ಬಿ) ಅಡಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಪದಗಳನ್ನು ಹೇಳಿದ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News