×
Ad

ತಮಿಳುನಾಡು: ವಿದ್ಯಾರ್ಥಿ ಆತ್ಮಹತ್ಯೆ

Update: 2023-11-06 19:26 IST

ಚೆನ್ನೈ: ತಮಿಳುನಾಡಿನ ಪುದುಕೋಟೈ ಜಿಲ್ಲೆಯ ಸರಕಾರಿ ಶಾಲೆಯ 11ನೇ ತರಗತಿ ವಿದ್ಯಾರ್ಥಿ ತನ್ನ ನಿವಾಸದಲ್ಲಿ ನ.2ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತನ್ನ ತರಗತಿಯಲ್ಲಿ ಇನ್ನೊಂದು ಸಮುದಾಯದ ವಿದ್ಯಾರ್ಥಿನಿಯರೊಂದಿಗೆ ಸಂವಹನ ನಡೆಸಿರುವ ಕಾರಣಕ್ಕೆ ಜಾತಿ ದೌರ್ಜನ್ಯಕ್ಕೆ ಒಳಗಾಗಿರುವುದು ಆತ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಎಂದು ವಿದ್ಯಾರ್ಥಿಯ ಹೆತ್ತವರು ಹಾಗೂ ಸಹಪಾಠಿಗಳು ಆರೋಪಿಸಿದ್ದಾರೆ.

ಆರಂಭದಲ್ಲಿ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದರು. ಆದರೆ, ವಿದ್ಯಾರ್ಥಿಯ ಹೆತ್ತವರ ದೂರು ನೀಡಿದ ಬಳಿಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News