×
Ad

ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡುವವರೆಗೂ ವಕ್ಫ್ ತಿದ್ದುಪಡಿ ಕಾಯ್ದೆಯಡಿ ತಮಿಳುನಾಡಿನಲ್ಲಿ ವಕ್ಫ್ ಮಂಡಳಿ ರಚಿಸುವುದಿಲ್ಲ : ಸಚಿವ ನಾಸರ್

Update: 2025-09-28 17:43 IST

 ಎಸ್.ಎಂ.ನಾಸರ್ | PC : PTI

ಚೆನ್ನೈ: ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡುವವರೆಗೆ ತಿದ್ದುಪಡಿ ಮಾಡಿದ ವಕ್ಫ್ ಕಾಯ್ದೆಯಡಿ ತಮಿಳುನಾಡಿನಲ್ಲಿ ವಕ್ಫ್ ಮಂಡಳಿಯನ್ನು ಪುನರ್ ರಚಿಸುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಎಸ್.ಎಂ.ನಾಸರ್ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸರಕಾರ 1995ರ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಸಂಯುಕ್ತ ವಕ್ಫ್ ನಿರ್ವಹಣೆ, ಸಬಲಿಕರಣ, ಕಾರ್ಯಕ್ಷಮತೆ ಮತ್ತು ಅಭಿವೃದ್ಧಿ ಕಾಯ್ದೆ-1995 ಎಂದು ಪರಿವರ್ತಿಸಿ 2025ರ ಏಪ್ರಿಲ್ 8ರಿಂದ ಜಾರಿಗೆ ತಂದಿದೆ.

ಆಡಳಿತಾರೂಢ ಡಿಎಂಕೆ ಪಕ್ಷವು ಈ ತಿದ್ದುಪಡಿ ಮಾಡಿದ ಕಾಯಿದೆಯನ್ನು ನಿರಂತರವಾಗಿ ವಿರೋಧಿಸುತ್ತಾ ಬಂದಿದೆ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಅದನ್ನು ಪ್ರಶ್ನಿಸಿದೆ. ಇತರ ಹಲವು ಪಕ್ಷಗಳು ಕೂಡ ಕಾಯ್ದೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದೆ. ಇವುಗಳನ್ನು ಗಣನೆಗೆ ತೆಗೆದುಕೊಂಡು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 15ರಂದು ತಿದ್ದುಪಡಿ ಮಾಡಿದ ಕಾಯಿದೆಯ ಕೆಲವು ನಿಬಂಧನೆಗಳನ್ನು ತಡೆಹಿಡಿದು ಮಧ್ಯಂತರ ಆದೇಶವನ್ನು ಹೊರಡಿಸಿದೆ ಎಂದು ನಾಸರ್ ಹೇಳಿದರು.

ತಿದ್ದುಪಡಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮುಸ್ಲಿಂ ಸಮುದಾಯದ ಹಕ್ಕುಗಳು ಮತ್ತು ಹಿತಾಸಕ್ತಿಗಳನ್ನು ರಕ್ಷಿಸುವುದು ಸರಕಾರದ ನಿಲುವಾಗಿದೆ ಎಂದು ಸಚಿವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News