×
Ad

ಬಿಹಾರ | ಶಾಲೆಗೆ ಕುಡಿದು ಬಂದು ರಂಪಾಟ: ಪ್ರಾಂಶುಪಾಲ, ಶಿಕ್ಷಕನ ಬಂಧನ

Update: 2024-11-22 10:52 IST

Photo credit: ndtv.com

ಬಿಹಾರ: ಮದ್ಯಪಾನ ಮಾಡಿ ಶಾಲೆಗೆ ಬಂದು ರಂಪಾಟ ಮಾಡಿದ್ದಲ್ಲದೆ ರಸ್ತೆಯಲ್ಲಿ ಬಿದ್ದುಕೊಂಡಿದ್ದ ನಳಂದ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಪ್ರಾಂಶುಪಾಲ ಮತ್ತು ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.

ಸರಕಾರಿ ಶಾಲೆಯ ಪ್ರಾಂಶುಪಾಲ ನಾಗೇಂದ್ರ ಪ್ರಸಾದ್ ಮತ್ತು ಶಿಕ್ಷಕ ಸುಬೋಧ್ ಕುಮಾರ್ ಬಂಧಿತರು. ಇವರಿಬ್ಬರು ಮದ್ಯಪಾನ ಮಾಡಿ ಶಾಲೆಗೆ ಬಂದಿದ್ದು, ಅಸಭ್ಯವಾಗಿ ವರ್ತಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಇಬ್ಬರು ಶಿಕ್ಷಕರು ದುರ್ವರ್ತನೆ ತೋರುವುದನ್ನು ಗಮನಿಸಿದ ಗ್ರಾಮಸ್ಥರು ಶಾಲೆಗೆ ಬಂದು ಪ್ರಶ್ನಿಸಿದ್ದಾರೆ. ಈ ವೇಳೆ ಶಿಕ್ಷಕರು ಗ್ರಾಮಸ್ಥರನ್ನು ನಿಂದಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇಬ್ಬರು ಕುಡಿದ ಮತ್ತಿನಲ್ಲಿ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರ ಜೊತೆ ವಿಲಕ್ಷಣವಾಗಿ ವರ್ತಿಸುವುದು ಕಂಡು ಬಂದಿದೆ. ನಶೆ ಹೆಚ್ಚಾಗಿ ಓರ್ವ ಶಿಕ್ಷಕ ನಡೆದಾಡಲು ಸಾಧ್ಯವಾಗದೆ ರಸ್ತೆಯಲ್ಲಿ ಬಿದ್ದುಕೊಂಡಿದ್ದಾರೆ. ಬಳಿಕ ಪೊಲೀಸರು ಬಂದು ಅವರನ್ನು ವ್ಯಾನ್ ನಲ್ಲಿ ಕರೆದುಕೊಂಡು ಹೋಗಿದ್ದಾರೆ.

ಘಟನೆಗೆ ಸಂಬಂಧಿಸಿ ಪ್ರಸಾದ್ ಮತ್ತು ಕುಮಾರ್ ಎಂಬವರನ್ನು ಬಂಧಿಸಲಾಗಿದ್ದು, ಅವರು ಮದ್ಯಪಾನ ಮಾಡಿದ್ದರು ಎನ್ನುವುದನ್ನು ಪೊಲೀಸರು ದೃಢಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News