×
Ad

ತಾಂತ್ರಿಕ ದೋಷ | ಉತ್ತರಾಖಂಡ ರಾಜ್ಯಪಾಲ ಗುರ್ಮಿತ್ ಸಿಂಗ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Update: 2026-03-08 21:29 IST

ಗುರ್ಮಿತ್ ಸಿಂಗ್ | Photo Credit : PTI  

ಡೆಹ್ರಾಡೂನ್, ಮಾ. 8: ಉತ್ತರಾಖಂಡದ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ (ನಿವೃತ್ತ) ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಶ್ರೀನಗರದ ಜಿವಿಕೆ ಹೆಲಿಪ್ಯಾಡ್‌ನಲ್ಲಿ ರವಿವಾರ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೌರಿ ಪೊಲೀಸ್ ಠಾಣೆಯ ಪೊಲೀಸರಿಂದ ಸ್ವೀಕರಿಸಲಾದ ಮಾಹಿತಿಯ ಪ್ರಕಾರ, ಹಾರಾಟದ ಸಂದರ್ಭ ಹೆಲಿಕಾಪ್ಟರ್‌ನಲ್ಲಿ ಕೆಲವು ತಾಂತ್ರಿಕ ದೋಷಗಳು ಕಾಣಸಿಕೊಂಡಿವೆ.

ಮುನ್ನೆಚ್ಚರಿಕೆ ಕ್ರಮವಾಗಿ ಪೈಲಟ್ ಹೆಲಿಕಾಪ್ಟರ್ ಅನ್ನು ಶ್ರೀನಗರದ ಜಿವಿಕೆ ಹೆಲಿಪ್ಯಾಡ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದರು. ಹೆಲಿಕಾಪ್ಟರ್ ಇಳಿದ ಬಳಿಕ ರಾಜ್ಯಪಾಲರನ್ನು ಶ್ರೀನಗರದಲ್ಲಿರುವ ಪೊಲೀಸ್ ಅತಿಥಿ ಗೃಹಕ್ಕೆ ಕರೆದೊಯ್ಯಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News