×
Ad

ಮನಮೋಹನ್ ಸಿಂಗ್ ಗೆ ಭಾರತ ರತ್ನ ನೀಡುವಂತೆ ತೆಲಂಗಾಣ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

Update: 2024-12-30 18:09 IST

Photo | hindustantimes

ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಭಾರತ ರತ್ನ ನೀಡುವಂತೆ ತೆಲಂಗಾಣ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ ಮಾಡಲಾಗಿದೆ.

ಮಾಜಿ ಪ್ರಧಾನಿಯವರ ನಿಧನಕ್ಕೆ ಸಂತಾಪ ಸೂಚಿಸಲು ಸೋಮವಾರ ಕರೆಯಲಾದ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮನಮೋಹನ್ ಸಿಂಗ್ ಅವರಿಗೆ ಭಾರತ ರತ್ನ ನೀಡುವಂತೆ ನಿರ್ಣಯವನ್ನು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮಂಡಿಸಿದ್ದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಸಿಂಗ್ ಅವರು ದೇಶವನ್ನು ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಬಲಪಡಿಸುವತ್ತ ಗಮನಹರಿಸಿದ್ದರು ಎಂದು ಹೇಳಿದ್ದಾರೆ.

ಪ್ರಜಾಪ್ರಭುತ್ವದ ರಕ್ಷಣೆಗಾಗಿ ದಿಲ್ಲಿಯಲ್ಲಿ ಕಾಂಗ್ರೆಸ್ ಸಂಸದರು ನಡೆಸಿದ ಪ್ರತಿಭಟನೆಯಲ್ಲಿ ಮನಮೋಹನ್ ಸಿಂಗ್ ಭಾಗವಹಿಸಿದ್ದನ್ನು ಮುಖ್ಯಮಂತ್ರಿ ಸ್ಮರಿಸಿದ್ದಾರೆ. ಇದು ಮಾಜಿ ಪ್ರಧಾನಿಯವರ ವಿನಯಶೀಲತೆಗೆ ಸಾಕ್ಷಿಯಾಗಿತ್ತು. ನಾವು ಈ ಘಟನೆಯನ್ನು ನಮ್ಮ ಜೀವನದುದ್ದಕ್ಕೂ ನೆನಪಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಚರ್ಚೆಯ ನಂತರ ಸಿಂಗ್ ಅವರಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡುವಂತೆ ಕೇಂದ್ರವನ್ನು ಕೋರುವ ನಿರ್ಣಯವನ್ನು ಸದನವು ಸರ್ವಾನುಮತದಿಂದ ಅಂಗೀಕರಿಸಿದೆ. ಮನಮೋಹನ್ ಸಿಂಗ್ ಅವರಿಗೆ ಗೌರವ ಸೂಚಕವಾಗಿ ಸದನದಲ್ಲಿ ಎರಡು ನಿಮಿಷಗಳ ಮೌನವನ್ನು ಆಚರಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News