×
Ad

ಸೌದಿ ಬಸ್ ಅಪಘಾತ: ಹೈದರಾಬಾದ್ ನಿವಾಸಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಸಿಎಂ ರೇವಂತ್ ರೆಡ್ಡಿ ಸೂಚನೆ

Update: 2025-11-17 13:15 IST

ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ (Photo: PTI)

ಹೈದರಾಬಾದ್: ಸೌದಿ ಅರೇಬಿಯಾದ ಮದೀನಾದ ಬಳಿ ಹೈದರಾಬಾದ್‌ ನಿಂದ ಉಮ್ರಾಗೆ ತೆರಳಿದವರು ಪ್ರಯಾಣಿಸುತ್ತಿದ್ದ ಬಸ್ ಅಪಘಾತವಾಗಿ 42 ಜನರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಕಚೇರಿಯ ಪ್ರಕಟನೆಯ ಪ್ರಕಾರ, ಮಕ್ಕಾದಿಂದ ಮದೀನಾಗೆ ತೆರಳುತ್ತಿದ್ದ ಉಮ್ರಾ ಯಾತ್ರಿಕರ ಬಸ್ ಅಪಘಾತವಾಗಿದೆ. ಘಟನೆಯ ಕುರಿತು ನಿಖರ ಮಾಹಿತಿ ಸಂಗ್ರಹಿಸಲು ಮುಖ್ಯ ಕಾರ್ಯದರ್ಶಿ ಕೆ. ರಾಮಕೃಷ್ಣ ರಾವ್ ಮತ್ತು ಡಿಜಿಪಿ ಶಿವಧರ್ ರೆಡ್ಡಿಗೆ ವಿದೇಶಾಂಗ ಸಚಿವಾಲಯ ಹಾಗೂ ಸೌದಿ ಅರೇಬಿಯದಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕ ಸಾಧಿಸುವಂತೆ ಮುಖ್ಯಮಂತ್ರಿ ನಿರ್ದೇಶಿಸಿದ್ದಾರೆ.

ಅಪಘಾತದಲ್ಲಿ ಹಾನಿಗೊಳಗಾದವರ ಕುಟುಂಬಗಳಿಗೆ ನೆರವಾಗಲು ಹೈದರಾಬಾದ್‌ನಲ್ಲಿ ನಿಯಂತ್ರಣ ಕೊಠಡಿ ತೆರೆಯಲಾಗಿದ್ದು, ಸರ್ಕಾರ ಬಿಡುಗಡೆ ಮಾಡಿದ ಸಂಪರ್ಕ ಸಂಖ್ಯೆಗಳನ್ನು ಹೀಗಿವೆ:

+91 79979 59754, +91 99129 19545.

ಮದೀನಾದ ಅಪಘಾತದಲ್ಲಿ ಹಲವಾರು ಭಾರತೀಯರು ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದ್ದು, ಜಿದ್ದಾದಲ್ಲಿರುವ ಭಾರತೀಯ ಕಾನ್ಸುಲೇಟ್ ಉಮ್ರಾ ಯಾತ್ರಿಕರನ್ನು ಬಸ್ ಕರೆದೊಯ್ಯುತ್ತಿದ್ದುದಾಗಿ ದೃಡಪಡಿಸಿದೆ.

ರಷ್ಯಾ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್ ದುರಂತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. “ರಿಯಾದ್‌ನ ರಾಯಭಾರ ಕಚೇರಿ ಮತ್ತು ಜಿದ್ದಾದ ಕಾನ್ಸುಲೇಟ್ ಸಂತ್ರಸ್ತ ಭಾರತೀಯರು ಮತ್ತು ಅವರ ಕುಟುಂಬಗಳಿಗೆ ಅಗತ್ಯ ನೆರವು ನೀಡುತ್ತಿವೆ” ಎಂದು ಅವರು ತಿಳಿಸಿದ್ದಾರೆ.

ತೆಲಂಗಾಣ ನಿವಾಸಿಗಳು ಎಷ್ಟು ಮಂದಿ ಈ ಅಪಘಾತದಲ್ಲಿ ಭಾಗಿಯಾಗಿದ್ದಾರೆ ಎನ್ನುವುದನ್ನು ಗುರುತಿಸಲು, ದಿಲ್ಲಿಲ್ಲಿರುವ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News