×
Ad

"ವಿಮಾನ ದುರಂತ ನನ್ನನ್ನು ದಿಗ್ಭ್ರಮೆಗೊಳಿಸಿದೆ": ಅಹ್ಮದಾಬಾದ್‌ನಲ್ಲಿ ವಿಮಾನ ಪತನಕ್ಕೆ ದುಃಖ ವ್ಯಕ್ತಪಡಿಸಿದ ಪ್ರಧಾನಿ ಮೋದಿ

Update: 2025-06-12 17:01 IST

ನರೇಂದ್ರ ಮೋದಿ | PC : PTI 

ಅಹ್ಮದಾಬಾದ್ : ಗುಜರಾತ್‌ನ ಅಹ್ಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದುಃಖವನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತವು ನನ್ನನ್ನು ದಿಗ್ಭ್ರಮೆಗೊಳಿಸಿದೆ ಮತ್ತು ದುಃಖಿತನನ್ನಾಗಿಸಿದೆ. ಇದು ಹೃದಯವಿದ್ರಾವಕವಾಗಿದೆ. ಈ ಕಷ್ಟದ ಸಮಯದಲ್ಲಿ ಎಲ್ಲರ ಮೇಲೆ ನನ್ನ ಪ್ರಾರ್ಥನೆಯಿದೆ. ಸಂತ್ರಸ್ತರಿಗೆ ಸಹಾಯ ಮಾಡಲು ಕೆಲಸ ಮಾಡುತ್ತಿರುವ ಸಚಿವರು ಮತ್ತು ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News