×
Ad

ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದವರನ್ನು ಯಾವಾಗಲೂ ಸ್ಮರಿಸಬೇಕು: 'ಮನ್ ಕಿ ಬಾತ್' ನಲ್ಲಿ ಪ್ರಧಾನಿ ಮೋದಿ

Update: 2025-06-29 18:29 IST

ನರೇಂದ್ರ ಮೋದಿ | PC : X \ @Indianinfoguide

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಮ್ಮ ಮಾಸಿಕ ರೇಡಿಯೋ ಪ್ರಸಾರ ಮನ್ನ್ ಕಿ ಬಾತ್ ನಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ್ದು, ಇಂದಿರಾಗಾಂಧಿ ಪ್ರಧಾನಿಯಾಗಿದ್ದ ಸಮಯದಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದನ್ನು ಖಂಡಿಸಿದರು.

ಅಂದಿನ ಕಾಂಗ್ರೆಸ್ ಸರ್ಕಾರ ಜನರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿದ ಅವರು, ಸಂವಿಧಾನವನ್ನು ಬಲಿಷ್ಠವಾಗಿಡಲು ಜನರು ಎಚ್ಚರವಾಗಿರಲು ಇದು ಪ್ರೇರೇಪಿಸುತ್ತದೆ. ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದ ರಾಜಕಾರಣಿಗಳನ್ನು ಯಾವಾಗಲೂ ಸ್ಮರಿಸಬೇಕು ಎಂದು ಹೇಳಿದರು.

ಮನ್ ಕಿ ಬಾತ್ ರೇಡಿಯೋ ಪ್ರಸಾರದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ತುರ್ತು ಪರಿಸ್ಥಿತಿ ಹೇರಿದವರು ಸಂವಿಧಾನವನ್ನು ಕೊಲೆ ಮಾಡುವುದಲ್ಲದೆ ನ್ಯಾಯಾಂಗವನ್ನು ತಮ್ಮ ಕೈಗೊಂಬೆಯನ್ನಾಗಿ ಮಾಡಿಕೊಂಡಿದ್ದರು ಎಂದು ಹೇಳಿದರು.

1975 ಮತ್ತು 1977 ರ ನಡುವಿನ 21 ತಿಂಗಳ ಅವಧಿಯಲ್ಲಿ ತುರ್ತು ಪರಿಸ್ಥಿತಿಯ ಸಮಯದಲ್ಲಿ ಜನರನ್ನು ದೊಡ್ಡ ಪ್ರಮಾಣದಲ್ಲಿ ಹಿಂಸಿಸಲಾಯಿತು ಎಂದು ಪ್ರಧಾನಿ ಮೋದಿ ಹೇಳಿದರು.

ಆ ಅವಧಿಯಲ್ಲಿ ಮರೆಯಲಾಗದ ಹಲವು ಉದಾಹರಣೆಗಳಿವೆ ಎಂದು ಹೇಳಿದ ಅವರು, 'ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಮತ್ತು ಅಟಲ್ ಬಿಹಾರಿ ವಾಜಪೇಯಿ ಮತ್ತು ಮಾಜಿ ಉಪ ಪ್ರಧಾನಿ ಜಗಜೀವನ್ ರಾಮ್ ಅವರ ಭಾಷಣಗಳ ತುಣುಕುಗಳನ್ನು ಅವರು ಉಲ್ಲೇಖಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News