×
Ad

ಪಶ್ಚಿಮ ಬಂಗಾಳ | ಹಳಿ ತಪ್ಪಿದ ಸಿಕಂದರಾಬಾದ್-ಶಾಲಿಮಾರ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು

Update: 2024-11-09 10:56 IST

Photo credit: NDTV

ಪಶ್ಚಿಮ ಬಂಗಾಳ: ಸಿಕಂದರಾಬಾದ್-ಶಾಲಿಮಾರ್ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಪಶ್ಚಿಮ ಬಂಗಾಳದ ಹೌರಾದ ನಲ್ಪುರ್ ನಿಲ್ದಾಣದ ಬಳಿ ಶನಿವಾರ ಬೆಳಿಗ್ಗೆ ಹಳಿ ತಪ್ಪಿರುವ ಬಗ್ಗೆ ರೈಲ್ವೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿಕಂದರಾಬಾದ್-ಶಾಲಿಮಾರ್ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ʼ22850ʼ ರೈಲಿನ ಮೂರು ಬೋಗಿಗಳು ಪಶ್ಚಿಮ ಬಂಗಾಳದ ಹೌರಾದ ನಲ್ಪುರ್ ರೈಲು ನಿಲ್ದಾಣದ ಬಳಿ ಶನಿವಾರ ಬೆಳಿಗ್ಗೆ ಹಳಿತಪ್ಪಿದೆ ಎಂದು ಆಗ್ನೇಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ(CPRO) ಓಂಪ್ರಕಾಶ್ ಚರಣ್ ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಯಾವುದೇ ಗಾಯ ಅಥವಾ ಸಾವುನೋವುಗಳು ಸಂಭವಿಸಿಲ್ಲ ಎಂದು ಆಗ್ನೇಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ವ್ಯವಸ್ಥೆ ಮಾಡಲಾಗಿದೆ. ಕೋಲ್ಕತ್ತಾಗೆ ಪ್ರಯಾಣಿಕರನ್ನು ಕರೆದೊಯ್ಯಲು ಬಸ್ ಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News