ಸಂಸದೆ ಸ್ಥಾನಕ್ಕೆ ಟಿಎಂಸಿಯ ಮಿಮಿ ಚಕ್ರವರ್ತಿ ರಾಜೀನಾಮೆ
Update: 2024-02-15 22:02 IST
Photo : ANI
ಹೊಸದಿಲ್ಲಿ : ನಟಿ ಹಾಗೂ ಟಿಎಂಸಿ ಸಂಸದೆ ಮಿಮಿ ಚಕ್ರವರ್ತಿ ಅವರು ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ. ಚಕ್ರವರ್ತಿ ತನ್ನ ರಾಜೀನಾಮೆಯನ್ನು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿಯವರಿಗೆ ಸಲ್ಲಿಸಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿದವು.
ಚಕ್ರವರ್ತಿ 2019ರ ಲೋಕಸಭಾ ಚುನಾವಣೆಗಳಲ್ಲಿ ಜಾದವಪುರ ಕ್ಷೇತ್ರದಿಂದ ಆಯ್ಕೆಯಾಗಿದ್ದರು.