×
Ad

'ಅತ್ಯಂತ ದುಃಖಕರ': ಮಹಾಕುಂಭ ಕಾಲ್ತುಳಿತ ಘಟನೆ ಬಗ್ಗೆ ಮೋದಿ ಸಂತಾಪ

Update: 2025-01-29 13:33 IST

ಪ್ರಧಾನಿ ನರೇಂದ್ರ ಮೋದಿ (PTI) 

ಹೊಸದಿಲ್ಲಿ: ಮಹಾ ಕುಂಭದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ತೀವ್ರ ಸಂತಾಪ ಸೂಚಿಸಿದ್ದು, ಈ ದುರಂತ ಅತ್ಯಂತ ದುಃಖಕರ ಎಂದು ಬಣ್ಣಿಸಿದ್ದಾರೆ.

ಈ ಕುರಿತು X ನಲ್ಲಿ ಪೋಸ್ಟ್ ಮಾಡಿರುವ ಅವರು, ʼ ನಾನು ಮುಖ್ಯಮಂತ್ರಿ ಯೋಗಿ ಜಿ ಅವರೊಂದಿಗೆ ಮಾತನಾಡುತ್ತಿದ್ದೇನೆ, ರಾಜ್ಯ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆʼ ಎಂದು ಹೇಳಿದ್ದಾರೆ.

ಪ್ರಯಾಗ್‌ರಾಜ್‌ನ ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನರೇಂದ್ರ ಮೋದಿ ಹಾರೈಸಿದ್ದಾರೆ.

ಮೌನಿ ಅಮವಾಸ್ಯೆಯ ಸಂದರ್ಭದಲ್ಲಿ ಪವಿತ್ರ ಸ್ನಾನ ಮಾಡಲು ಕೋಟ್ಯಂತರ ಯಾತ್ರಿಕರು ಸೇರಿದಾಗ ಉಂಟಾದ ನೂಕುನುಗ್ಗಲಿನಿಂದ ಬುಧವಾರ ಮುಂಜಾನೆ ಮಹಾ ಕುಂಭದ ಸಂಗಮ ಪ್ರದೇಶದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಹಲವಾರು ಸಾವುನೋವುಗಳು ಸಂಭವಿಸಿದೆ.

ಅಖಾರ ಮಾರ್ಗದಲ್ಲಿ ಕೆಲವು ಭಕ್ತರು ಬ್ಯಾರಿಕೇಡ್‌ಗಳನ್ನು ಹತ್ತಿದ ನಂತರ ಈ ಘಟನೆ ನಡೆದಿದೆ ಎಂದು ಘಟನೆ ಕುರಿತು ಸಿಎಂ ಆದಿತ್ಯನಾಥ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News