ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಸರಣಿ ಅಪಘಾತ : 20 ಕಾರುಗಳಿಗೆ ಢಿಕ್ಕಿ ಹೊಡೆದ ಟ್ರಕ್, ಮಹಿಳೆ ಮೃತ್ಯು
Update: 2025-07-26 21:47 IST
Photo | NDTV
ಮುಂಬೈ: ರಾಯಗಢ ಜಿಲ್ಲೆಯ ಖೋಪೋಲಿ ಬಳಿ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಕನಿಷ್ಠ 19 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪೊಲೀಸರ ಪ್ರಕಾರ, ಚಾಲಕನ ನಿಯಂತ್ರಣ ಕಳೆದುಕೊಂಡ ಟ್ರಕ್, ಬಿಎಂಡಬ್ಲ್ಯೂ ಮತ್ತು ಮರ್ಸಿಡಿಸ್‌ನಂತಹ ದುಬಾರಿ ಕಾರುಗಳು ಸೇರಿದಂತೆ ಸುಮಾರು 20 ವಾಹನಗಳಿಗೆ ಢಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು, 19 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನವಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೋರ್ವರು ತಿಳಿಸಿದ್ದಾರೆ.
ಟ್ರಕ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಪ್ರಾಥಮಿಕ ವೈದ್ಯಕೀಯ ಪರೀಕ್ಷೆಯಲ್ಲಿ ಟ್ರಕ್ ಚಾಲಕ ಮದ್ಯಪಾನ ಮಾಡಿಲ್ಲ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.