×
Ad

"MVA ಮೈತ್ರಿಯಿಂದ ನಾವು ಹೊರ ಬರುವುದಿಲ್ಲ": ಪ್ರತಿಪಕ್ಷಗಳ ಮೈತ್ರಿಕೂಟದಲ್ಲಿ ʼಬಿರುಕುʼ ಕುರಿತ ವದಂತಿಗೆ ಸಂಜಯ್ ರಾವತ್ ಸ್ಪಷ್ಟನೆ

Update: 2024-11-28 15:30 IST

ಉದ್ಧವ್ ಠಾಕ್ರೆ | PC : PTI 

ಮಹಾರಾಷ್ಟ್ರ: ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಬಳಿಕ ಪ್ರತಿಪಕ್ಷಗಳ ಮಹಾ ವಿಕಾಸ್ ಅಘಾಡಿ ಮೈತ್ರಿಯಲ್ಲಿ ಯಾವುದೇ ಬಿರುಕು ಇಲ್ಲ ಎಂದು ಶಿವಸೇನಾ(ಉದ್ಧವ್ ಬಣ) ನಾಯಕ ಸಂಜಯ್ ರಾವತ್ ಸ್ಪಷ್ಟಪಡಿಸಿದ್ದು, ಈ ಕುರಿತ ಸುದ್ದಿಗಳು ಆಧಾರರಹಿತ ಎಂದು ವದಂತಿಗಳನ್ನು ತಳ್ಳಿ ಹಾಕಿದ್ದಾರೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ 230 ಸ್ಥಾನಗಳಲ್ಲಿ ಮಹಾಯುತಿ ಮೈತ್ರಿಯು ಗೆಲುವನ್ನು ಸಾಧಿಸಿದೆ. ಬಿಜೆಪಿ 132 ಸ್ಥಾನಗಳನ್ನು ಗೆದ್ದು ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ಎನ್ಸಿಪಿ ಕ್ರಮವಾಗಿ 57 ಮತ್ತು 41 ಸ್ಥಾನಗಳನ್ನು ಗಳಲ್ಲಿ ಗೆಲುವನ್ನು ಸಾಧಿಸಿದೆ. ಪ್ರತಿಪಕ್ಷಗಳ MVA ಮೈತ್ರಿಕೂಟವು ಕೇವಲ 46 ಸ್ಥಾನಗಳನ್ನು ಪಡೆದುಕೊಳ್ಳುವಲ್ಲಿ ಮಾತ್ರ ಯಶಸ್ವಿಯಾಗಿದೆ. ಕಾಂಗ್ರೆಸ್ 16, ಎನ್ ಸಿಪಿ(ಎಸ್ಪಿ) 10, ಶಿವಸೇನೆ (ಉದ್ಧವ್ ಬಣ) 20 ಸ್ಥಾನಗಳಲ್ಲಿ ಮಾತ್ರ ಗೆಲುವನ್ನು ಸಾಧಿಸಿತ್ತು.

INDIA ಮೈತ್ರಿಕೂಟವು 2024ರ ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಹೋರಾಡುವ ಮೂಲಕ ಯಶಸ್ವಿಯಾಗಿದೆ. ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಯಾರಾದರೂ ವದಂತಿ ಹಬ್ಬಿದರೆ, ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿರಬಹುದು. ನಾವು ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದಾಗ, ಉದ್ಧವ್ ಸೇನೆಯು ಮೈತ್ರಿಯಿಂದ ಬೇರ್ಪಡಬೇಕು ಎಂದು ಯಾರೂ ಹೇಳಲಿಲ್ಲ ಎಂದು ಸಂಜಯ್ ರಾವುತ್ ಹೇಳಿದ್ದು, ಮೈತ್ರಿಯಿಂದ ಹೊರ ಬರುತ್ತಾರೆ ಎಂಬ ವದಂತಿಯನ್ನು ತಳ್ಳಿ ಹಾಕಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News