×
Ad

ಉತ್ತರ ಪ್ರದೇಶ | ಮಹಾರಾಜ್‌ ಗಂಜ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ; ಆರು ಕಾರ್ಮಿಕರಿಗೆ ಗಾಯ

Update: 2025-04-29 10:24 IST

PC : X \ @DNHindi

ಮಹಾರಾಜ್‌ ಗಂಜ್ (ಉತ್ತರ ಪ್ರದೇಶ ): ಇಲ್ಲಿನ ಮೋಹನಾಪುರ್ ಧಲಾ ಬಳಿಯ ಸೋನೌಲಿ-ಗೋರಖ್‌ ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಕನಿಷ್ಠ ಆರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಸೋಮವಾರ ರಾತ್ರಿ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿರುವಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

"ಹೆದ್ದಾರಿ ನಿರ್ಮಾಣದ ಭಾಗವಾಗಿ ನಡೆಯುತ್ತಿರುವ ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ಇದ್ದಕ್ಕಿದ್ದಂತೆ ಕುಸಿಯಿತು. ಹಲವಾರು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡರು" ಎಂದು ಸ್ಥಳೀಯ ಪುರಂದರಪುರ ಪೊಲೀಸ್ ಠಾಣೆಯ ಠಾಣಾಧಿಕಾರಿ ಧರ್ಮೇಂದ್ರ ಸಿಂಗ್ ಹೇಳಿದ್ದಾರೆ.

ಘಟನೆಯ ನಂತರ ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿದವು. ಅವಶೇಷಗಳಡಿಯಿಂದ ಗಾಯಗೊಂಡ ಕಾರ್ಮಿಕರನ್ನು ರಕ್ಷಿಸಿ ಫರೇಂಡಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತು ಎಂದು ತಿಳಿದು ಬಂದಿದೆ.

"ಗಾಯಗೊಂಡ ಎಲ್ಲಾ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ" ಎಂದು ಪೊಲೀಸರು ತಿಳಿಸಿದ್ದಾರೆ.

ಜೆಸಿಬಿ ಯಂತ್ರಗಳನ್ನು ಬಳಸಿ ಅವಶೇಷಗಳನ್ನು ತೆರವುಗೊಳಿಸಲಾಗಿದೆ. ಕುಸಿತದ ಕಾರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News