×
Ad

ಜು.23ರಂದು ಕೇಂದ್ರ ಬಜೆಟ್ ಮಂಡನೆ

Update: 2024-07-06 16:55 IST

ವಿತ್ತಸಚಿವೆ ನಿರ್ಮಲಾ ಸೀತಾರಾಮನ್ (PTI)

ಹೊಸದಿಲ್ಲಿ: 2024-25ನೇ ವಿತ್ತವರ್ಷಕ್ಕಾಗಿ ಕೇಂದ್ರ ಮುಂಗಡಪತ್ರ ಜು.23ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ ಬಜೆಟ್ ಅಧಿವೇಶನವು ಜು.22ರಿಂದ ಆ.12ರವರೆಗೆ ನಡೆಯಲಿದೆ.

ಎಕ್ಸ್ ಪೋಸ್ಟ್ ನಲ್ಲಿ ಬಜೆಟ್ ಮಂಡನೆ ದಿನಾಂಕವನ್ನು ಪ್ರಕಟಿಸಿರುವ ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು ಅವರು, ‘2024 ಜು.22ರಿಂದ ಆ.12ರವರೆಗೆ ಸಂಸತ್ತಿನ ಬಜೆಟ್ ಅಧಿವೇಶನವನ್ನು ನಡೆಸುವ ಸರಕಾರದ ಪ್ರಸ್ತಾವನೆಯನ್ನು ರಾಷ್ಟ್ರಪತಿಗಳು ಅನುಮೋದಿಸಿದ್ದಾರೆ. ಜು.23ರಂದು ಲೋಕಸಭೆಯಲ್ಲಿ ಕೇಂದ್ರ ಮುಂಗಡಪತ್ರವನ್ನು ಮಂಡಿಸಲಾಗುವುದು’ ಎಂದು ತಿಳಿಸಿದ್ದಾರೆ.

ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೋದಿ 3.0 ಸರಕಾರದ ಪೂರ್ಣ ಬಜೆಟ್ ಅನ್ನು ಮಂಡಿಸಲಿದ್ದಾರೆ.

ಫೆ.1ರಂದು ಸಂಸತ್ತಿನಲ್ಲಿ ಮಧ್ಯಂತರ ಬಜೆಟ್ ಅನ್ನು ಮಂಡಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News