×
Ad

ಉ.ಪ್ರ:ಅತ್ಯಾಚಾರ ಸಂತ್ರಸ್ತೆ ದಲಿತ ಬಾಲಕಿಯ ಆತ್ಮಹತ್ಯೆ

Update: 2023-06-23 23:42 IST

Photo: PTI

ಬಾರಾಬಂಕಿ: ತನ್ನ ಹೇಳಿಕೆಯನ್ನು ದಾಖಲಿಸಲು ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಬೇಕಿದ್ದ ಅತ್ಯಾಚಾರ ಸಂತ್ರಸ್ತೆ 16ರ ಹರೆಯದ ದಲಿತ ಬಾಲಕಿಯೋರ್ವಳು ಗುರುವಾರ ಇಲ್ಲಿಯ ಹೈದರ್ಗಡ ಪ್ರದೇಶದಲ್ಲಿಯ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಕರ್ತವ್ಯಲೋಪದ ಆರೋಪದಲ್ಲಿ ಪ್ರಕರಣದ ತನಿಖಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಜೂ.17ರಂದು ಹೈದರ್ಗಡ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು, ಗುರುವಾರ ಆರೋಪಿಯನ್ನು ಬಂಧಿಸಲಾಗಿದ್ದು, ಬಾಲಕಿಯು ತನ್ನ ಹೇಳಿಕೆಯನ್ನು ದಾಖಲಿಸಲು ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಬೇಕಿತ್ತು. ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದ್ದು, ತನಿಖೆಯು ಪ್ರಗತಿಯಲ್ಲಿದೆ ಎಂದು ಎಸ್ಪಿ ದಿನೇಶಕುಮಾರ ಸಿಂಗ್ ತಿಳಿಸಿದರು.

ಪ್ರಕರಣವನ್ನು ಹಿಂದೆಗೆದುಕೊಳ್ಳುವಂತೆ ಬೆದರಿಕೆಯೊಡ್ಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರ ವೈಫಲ್ಯದಿಂದಾಗಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಈ ಆರೋಪವನ್ನೂ ಪರಿಶೀಲಿಸಲಾಗುತ್ತಿದೆ ಎಂದು ಸಿಂಗ್ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News