×
Ad

ಉತ್ತರ ಪ್ರದೇಶ | ಮಹಿಳೆಯ ಶವವನ್ನು ಅಂತ್ಯಕ್ರಿಯೆಗಾಗಿ ಬೈಕ್‌ನಲ್ಲಿ ಸಾಗಿಸಿದ ಘಟನೆ ಕ್ಯಾಮೆರಾದಲ್ಲಿ ಸೆರೆ

Update: 2025-09-09 20:40 IST

Screengrab | PC : X 

ಲಕ್ನೋ,ಸೆ.9: ವಾಹನ ಲಭ್ಯವಾಗದೆ ಮಹಿಳೆಯೋರ್ವಳ ಶವವನ್ನು ಅಂತ್ಯಸಂಸ್ಕಾರಕ್ಕಾಗಿ ಸ್ಮಶಾನಕ್ಕೆ ಬೈಕ್‌ ನಲ್ಲಿ ಸಾಗಿಸಿದ ಘಟನೆ ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯ ಮೊಹಬ್ಬತ್‌ ಪುರ ಜೀತಾ ಗ್ರಾಮದಲ್ಲಿ ನಡೆದಿದ್ದು, ಇದು ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿದೆ.

ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು,ವಿವಿಧ ವೇದಿಕೆಗಳಲ್ಲಿ ಚರ್ಚೆಗೆ ಕಾರಣವಾಗಿದೆ.

ವೀಡಿಯೊವನ್ನು ಹಂಚಿಕೊಂಡಿರುವ ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ರಾಜ್ಯ ಸರಕಾರವನ್ನು ಟೀಕಿಸಿದ್ದಾರೆ. ‘ಇದಕ್ಕಿಂತ ಹೆಚ್ಚು ನಾಚಿಕೆಗೇಡಿನ ವಿಷಯ ಇನ್ನೊಂದಿಲ್ಲ. ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರು ಈ ಬಗ್ಗೆ ಹೇಳಲು ಇನ್ನೇನೂ ಉಳಿದಿಲ್ಲ’ ಎಂದು ಅವರು ಎಕ್ಸ್ ಪೋಸ್ಟ್‌ ನಲ್ಲಿ ಬರೆದಿದ್ದಾರೆ.

ಮಾಧ್ಯಮ ವರದಿಯಂತೆ ಮೊಹಬ್ಬತ್‌ ಪುರ ಜೀತಾ ಗ್ರಾಮದ ನಿವಾಸಿ ಬುದ್ಧರಾಣಿ ನಿಗೂಢ ಸಾವನಪ್ಪಿದ್ದಳು. ಆಕೆಯ ಕೊಲೆಯಾಗಿದೆ ಎಂದು ಸಂಬಂಧಿಗಳು ಆರೋಪಿಸಿದ್ದಾರೆ. ಆಕೆಯ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಪೋಲಿಸರು ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದರು. ಮಹಿಳೆಯ ಸಾವಿನ ಕುರಿತು ನಡೆಯುತ್ತಿದೆ ಎಂದು ಪೋಲಿಸರು ತಿಳಿಸಿದ್ದಾರೆ.

ಮೃತ ಮಹಿಳೆಯ ಪತಿ ಚಂಗುಲಾಲ್ ಮತ್ತು ಪುತ್ರ ಧರ್ಮೇಂದ್ರ ಘಾಜಿಯಾಬಾದ್‌ ನಲ್ಲಿ ಖಾಸಗಿ ಉದ್ಯೋಗದಲ್ಲಿದ್ದಾರೆ. ಮೃತದೇಹವನ್ನು ಸಾಗಿಸಲು ವಾಹನವನ್ನು ಪಡೆದುಕೊಳ್ಳಲು ಅವರಿಗೆ ಸಾಧ್ಯವಿರಲಿಲ್ಲ. ಬೇರೆ ದಾರಿಯಿಲ್ಲದೆ ಬೈಕ್‌ನಲ್ಲಿ ಶವವನ್ನು ಸ್ಮಶಾನಕ್ಕೆ ಸಾಗಿಸಿದ್ದರು ಎಂದು ವರದಿಯು ತಿಳಿಸಿದೆ.

ಈ ನಡುವೆ ಜಿಲ್ಲಾಧಿಕಾರಿ ಅಧಿಕೃತ ವಿಚಾರಣೆಗೆ ಆದೇಶ ನೀಡಿದ್ದಾರೆ. ಇಡೀ ಘಟನೆಯ ಕುರಿತು ವಿವರವಾದ ವರದಿಯನ್ನು ಸಾಧ್ಯವಾದಷ್ಟು ಶೀಘ್ರ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವರದಿ ಸಲ್ಲಿಕೆ ಬಳಿಕ ಮುಂದಿನ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಸುದ್ದಿಸಂಸ್ಥೆಗೆ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News