×
Ad

Uttar Pradesh| SIRಗೆ ಕಾಲಾವಕಾಶ ವಿಸ್ತರಣೆ; ಮಾರ್ಚ್ 6ಕ್ಕೆ ಅಂತಿಮ ಪಟ್ಟಿ

Update: 2025-12-30 20:47 IST

ಸಾಂದರ್ಭಿಕ ಚಿತ್ರ | Photo Credit : PTI 

ಲಕ್ನೋ: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಮತ್ತೆ ವಿಸ್ತರಿಸಲಾಗಿದ್ದು, ಕರಡು ಮತದಾರರ ಪಟ್ಟಿಯನ್ನು 2026ರ ಜನವರಿ 6ರಂದು ಹಾಗೂ ಅಂತಿಮ ಪಟ್ಟಿಯನ್ನು ಮಾರ್ಚ್ 6ರಂದು ಪ್ರಕಟಿಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ.

ಈ ಹಿಂದೆ ಮೊದಲ ಮರುಹೊಂದಾಣಿಕೆಯ ಬಳಿಕ ಕರಡು ಪಟ್ಟಿಯನ್ನು ಡಿಸೆಂಬರ್ 31, 2025ರಂದು ಪ್ರಕಟಿಸುವುದಾಗಿ ಆಯೋಗ ಘೋಷಿಸಿತ್ತು. ಆದರೆ ಪರಿಷ್ಕೃತ ವೇಳಾಪಟ್ಟಿಯಂತೆ ದಿನಾಂಕವನ್ನು ಮುಂದೂಡಲಾಗಿದೆ.

ರಾಜ್ಯದ ಮುಖ್ಯ ಚುನಾವಣಾಧಿಕಾರಿ ನವದೀಪ್ ರಿನ್ವಾ ಹೇಳಿಕೆಯಲ್ಲಿ, ಜನವರಿ 6ರಿಂದ ಫೆಬ್ರವರಿ 6ರವರೆಗೆ ಮತದಾರರಿಂದ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು ಎಂದು ತಿಳಿಸಿದ್ದಾರೆ. ಇದೇ ಅವಧಿಯಲ್ಲಿ ನೋಟಿಸ್ ಹಂತ, ಆಕ್ಷೇಪಣೆಗಳ ವಿಲೇವಾರಿ ಹಾಗೂ ಎಣಿಕೆ ನಮೂನೆಗಳ ಮೇಲಿನ ನಿರ್ಧಾರ ಪ್ರಕ್ರಿಯೆಗಳು ನಡೆಯಲಿದ್ದು, ಮಾರ್ಚ್ 6ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಮೊದಲು ಕರಡು ಪಟ್ಟಿಯ ಪ್ರಕಟಣೆಗೆ ಚುನಾವಣಾ ಆಯೋಗವು ಗಡುವು ಡಿಸೆಂಬರ್ 26 ಎಂದು ನಿಗದಿಪಡಿಸಿತ್ತು. ಈ ದಿನಾಂಕವನ್ನು ತಮಿಳುನಾಡು, ಗುಜರಾತ್, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ರಾಜ್ಯಗಳಿಗೂ, ಅಂಡಮಾನ್–ನಿಕೋಬಾರ್ ದ್ವೀಪಗಳ ಕೇಂದ್ರಾಡಳಿತ ಪ್ರದೇಶಕ್ಕೂ ಅನ್ವಯಿಸಲಾಗಿತ್ತು.

ಚುನಾವಣಾ ಆಯೋಗ ನವೆಂಬರ್ 4, 2025ರಂದು ಉತ್ತರ ಪ್ರದೇಶ ಸೇರಿದಂತೆ ಒಟ್ಟು 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News