Uttar Pradesh | ಉಪಮುಖ್ಯಮಂತ್ರಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಕ್ನೋದಲ್ಲಿ ತುರ್ತು ಭೂಸ್ಪರ್ಶ
ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ | Photo Credit : PTI
ಲಕ್ನೋ, ಮಾ.7: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಕ್ನೋದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ತಾಂತ್ರಿಕ ದೋಷದಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಬಲ್ಲ ಮೂಲಗಳು ಶನಿವಾರ ತಿಳಿಸಿವೆ.
ಮೌರ್ಯ ಹಲವಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹೆಲಿಕಾಪ್ಟರ್ ಮೂಲಕ ಕೌಶಾಂಬಿಗೆ ಪ್ರಯಾಣಿಸುತ್ತಿದ್ದರು ಎಂದು ಬಿಜೆಪಿ ನಾಯಕರೋರ್ವರು ತಿಳಿಸಿದ್ದಾರೆ.
ಮೌರ್ಯ, ಅವರ ಸಹಾಯಕ ವಿವೇಕ ಮತ್ತು ಇಬ್ಬರು ಪೈಲಟ್‌ಗಳು ಸೇರಿದಂತೆ ಐವರು ಇದ್ದ ಹೆಲಿಕಾಪ್ಟರ್ ಲಕ್ನೋದ ಲಾ ಮಾರ್ಟಿನಿಯರ್ ಕಾಲೇಜು ಮೈದಾನದ ಹೆಲಿಪ್ಯಾಡ್‌ನಿಂದ ಟೇಕ್‌ಆಫ್ ಆಗಿತ್ತು. ಕೆಲವೇ ಕ್ಷಣಗಳಲ್ಲಿ ಹೆಲಿಕಾಪ್ಟರ್‌ನೊಳಗೆ ಹೊಗೆ ಕಾಣಿಸಿಕೊಂಡ ಬಳಿಕ ಪೈಲಟ್‌ಗಳು ಲಕ್ನೋ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶಕ್ಕೆ ನಿರ್ಧರಿಸಿದರು ಎಂದು ಅವರು ತಿಳಿಸಿದ್ದಾರೆ.
ಬಳಿಕ ಮೌರ್ಯ ಇನ್ನೊಂದು ಹೆಲಿಕಾಪ್ಟರ್ ನಲ್ಲಿ ಕೌಶಾಂಬಿಗೆ ತೆರಳಿದರು.