×
Ad

ಉತ್ತರ ಪ್ರದೇಶ | ಕಟ್ಟಡ ಕುಸಿತ : ಕನಿಷ್ಠ 5 ಮಂದಿ ಮೃತ್ಯು, 24 ಜನರಿಗೆ ಗಾಯ

Update: 2024-09-07 21:41 IST

PC : ANI

ಲಕ್ನೋ : ಇಲ್ಲಿನ ಟ್ರಾನ್ಸ್ಪೋರ್ಟ್ ನಗರದಲ್ಲಿ ಶನಿವಾರ ಸಂಜೆ ಮೂರು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ ಐದು ಮಂದಿ ಮೃತಪಟ್ಟು, 24 ಜನರು ಗಾಯಗೊಂಡಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

‘ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತುಗಳು ಇನ್ನಷ್ಟೇ ಪತ್ತೆಯಾಗಬೇಕಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.

“ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯಲಾಗುತ್ತಿದೆ” ಎಂದು ಕಮಿಷನರ್ ಜಿ. ಎಸ್‌ ನವೀನ್‌ ಕುಮಾರ್‌ ತಿಳಿಸಿದ್ದಾರೆ.

‘ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸುಮಾರು ನಾಲ್ಕು ವರ್ಷಗಳ ಹಿಂದೆ ಕಟ್ಟಡವನ್ನು ನಿರ್ಮಿಸಲಾಗಿದೆ. ಮೂರು ಅಂತಸ್ತಿನ ಕಟ್ಟಡದಲ್ಲಿ ಕೆಲವು ನಿರ್ಮಾಣ ಕಾರ್ಯಗಳು ನಡೆಯುತ್ತಿದ್ದವು. ಕಟ್ಟಡವನ್ನು ಉಗ್ರಾಣವಾಗಿಯೂ ಬಳಸಲಾಗುತ್ತಿತ್ತು” ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News