ಉತ್ತರಪ್ರದೇಶ ರೈಲು ಢಿಕ್ಕಿ : ಓರ್ವ ವಿದ್ಯಾರ್ಥಿನಿ ಸಾವು, ಮತ್ತೋರ್ವೆಗೆ ಗಾಯ
ಸಾಂದರ್ಭಿಕ ಚಿತ್ರ
ಜಲೌನ್ : ಕೋಚಿಂಗ್ ಕ್ಲಾಸ್ ತೆರಳುತ್ತಿರುವ ಸಂದರ್ಭ ರೈಲು ಢಿಕ್ಕಿಯಾಗಿ ಓರ್ವ ವಿದ್ಯಾರ್ಥಿನಿ ಮೃತಪಟ್ಟ ಹಾಗೂ ಇನ್ನೋರ್ವ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಉತ್ತರಪ್ರದೇಶದ ಜಲೌನದಲ್ಲಿ ಸಂಭವಿಸಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಗೆಳತಿಯರಾದ ವರ್ಷ (18) ಹಾಗೂ ಕಾಜೋಲ್ (17) ಒರಾಯಿ ಪ್ರದೇಶದಲ್ಲಿರುವ ತಮ್ಮ ಕೋಚಿಂಗ್ ಕೇಂದ್ರಕ್ಕೆ ತೆರಳುತ್ತಿದ್ದರು ಅವರು ಮಂಜಿನಿಂದಾಗಿ ರೈಲು ಆಗಮಿಸುತ್ತಿರುವುದನ್ನು ಗಮನಿಸದೇ ಅಜ್ನಾರಿ ರೈಲ್ವೇ ಕ್ರಾಸಿಂಗ್ ದಾಟಲು ಪ್ರಯತ್ನಿಸಿದರು. ಈ ಸಂದರ್ಭ ರೈಲು ಅವರಿಗೆ ಢಿಕ್ಕಿ ಹೊಡೆದಿದೆ ಎಂದು ಅವರು ಹೇಳಿದ್ದಾರೆ.
ರೈಲು ಢಿಕ್ಕಿಯಾಗಿ ಕಾಜೋಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ, ವರ್ಷಾ ಗಂಭೀರ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಸುದ್ದಿ ತಿಳಿದ ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದರು. ಗಂಭೀರ ಗಾಯಗೊಂಡಿದ್ದ ವರ್ಷಾಳನ್ನು ಒರಾಯಿಯಲ್ಲಿರುವ ವೈದ್ಯಕೀಯ ಕಾಲೇಜಿಗೆ ಕರೆದೊಯ್ದರು. ವರ್ಷಾಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾನ್ಪುರ ವೈದ್ಯಕೀಯ ಕಾಲೇಜಿಗೆ ಶಿಫಾರಸು ಮಾಡಲಾಗಿದೆ ಎಂದು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಶ್ ಕುಮಾರ್ ಮೌರ್ಯಾ ಹೇಳಿದ್ದಾರೆ.