ಉತ್ತರಾಖಂಡದಲ್ಲಿ ಮೇಘಸ್ಫೋಟದಿಂದ ಹಠಾತ್ ಪ್ರವಾಹ: 9 ಮಂದಿ ಕಾರ್ಮಿಕರು ನಾಪತ್ತೆ
Update: 2025-06-29 10:00 IST
ಹೊಸದಿಲ್ಲಿ: ಉತ್ತರಾಖಂಡದ ಬಾಲಿಗಢದಲ್ಲಿ ಮೇಘಸ್ಫೋಟದಿಂದ ಹಠಾತ್ ಪ್ರವಾಹ ಉಂಟಾಗಿ ನಿರ್ಮಾಣ ಹಂತದ ಹೋಟೆಲ್‌ನಲ್ಲಿದ್ದ 9 ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ.
ಉತ್ತರಾಖಂಡದ ಹಲವು ಭಾಗಗಳಲ್ಲಿ ಕಳೆದರೆಡು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಬಾರ್ಕೋಟ್-ಯಮುನೋತ್ರಿ ರಸ್ತೆಯಲ್ಲಿ ಮೇಘಸ್ಫೋಟ ಸಂಭವಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಎನ್‌ಡಿಆರ್‌ಎಫ್, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ಪೊಲೀಸರ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ಉತ್ತರಕಾಶಿ ಜಿಲ್ಲಾಧಿಕಾರಿ ಪ್ರಶಾಂತ್ ಆರ್ಯ ತಿಳಿಸಿದ್ದಾರೆ.
ಗುಡ್ಡದ ಮಣ್ಣು ಮತ್ತು ಇತರೆ ಅವಶೇಷಗಳು ರಸ್ತೆಗೆ ಬೀಳುತ್ತಿರುವುದರಿಂದ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.