×
Ad

ಜ್ಞಾನವಾಪಿ ಪ್ರಕರಣ | ಹೆಚ್ಚುವರಿ ASI ಸಮೀಕ್ಷೆ ಕೋರಿದ್ದ ಅರ್ಜಿ ತಿರಸ್ಕರಿಸಿದ ವಾರಣಾಸಿ ನ್ಯಾಯಾಲಯ

Update: 2024-10-25 20:42 IST

 ಜ್ಞಾನವಾಪಿ ಸಂಕೀರ್ಣ | PC : PTI 

ಹೊಸದಿಲ್ಲಿ : ಜ್ಞಾನವಾಪಿ ಸಂಕೀರ್ಣದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ (ASI) ಹೆಚ್ಚುವರಿ ಸಮೀಕ್ಷೆ ನಡೆಸುವಂತೆ ಹಿಂದೂ ಪರವಾಗಿ ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.

ವಾರಣಾಸಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಯುಗುಲ್ ಶಂಭು ಅವರ ಪೀಠವು, ಅರ್ಜಿಯನ್ನು ವಜಾಗೊಳಿಸಿದೆ.

ಹೆಚ್ಚುವರಿ ಸಮೀಕ್ಷೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದ ವಕೀಲ ವಿಜಯ್ ಶಂಕರ್ ರಸ್ತೋಗಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಆದೇಶವನ್ನು ಪರಿಶೀಲಿಸಲಾಗುವುದು. ಆ ಬಳಿಕ ಅಲಹಾಬಾದ್ ಹೈಕೋರ್ಟ್ ಅಥವಾ ಜಿಲ್ಲಾ ನ್ಯಾಯಾಲಯದ ಮೊರೆ ಹೋಗುವ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.

ಫೆಬ್ರವರಿಯಲ್ಲಿ, ರಸ್ತೋಗಿ ಇಡೀ ಜ್ಞಾನವಾಪಿ ಸಂಕೀರ್ಣದ ಸಮಗ್ರ ಸಮೀಕ್ಷೆಯನ್ನು ನಡೆಸಲು ಎಎಸ್ಐಗೆ ಆದೇಶ ನೀಡುವಂತೆ ಕೋರಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು. ನಾವು ಸಂಪೂರ್ಣ ಜ್ಞಾನವಾಪಿ ಸಂಕೀರ್ಣದ ಸಮೀಕ್ಷೆ ನಡೆಸಲು ಎಎಸ್ಐಗೆ ಆದೇಶ ನೀಡುವಂತೆ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದೇವೆ ಎಂದು ಹೇಳಿದ್ದರು.

ಪುರಾತತ್ವ ವಿಧಾನಗಳು, ಜಿಪಿಆರ್ ಅನ್ನು ಬಳಸಿಕೊಂಡು ಸಂಪೂರ್ಣ ಜ್ಞಾನವಾಪಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಮಹಾನಿರ್ದೇಶಕರಿಗೆ ನಿರ್ದೇಶನ ನೀಡುವಂತೆ ರಸ್ತೋಗಿ ತಮ್ಮ ಅರ್ಜಿಯಲ್ಲಿ ನ್ಯಾಯಾಲಯವನ್ನು ಕೋರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News