ಉಪ ರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ಆಯ್ಕೆಗೆ ಮೋದಿ, ನಡ್ಡಾಗೆ ಅಧಿಕಾರ
Update: 2025-08-07 22:08 IST
Photo : financialexpress
ಹೊಸದಿಲ್ಲಿ, ಆ. 7: ಎನ್‌ಡಿಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಎನ್‌ಡಿಎ ಗುರುವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರಿಗೆ ಅಧಿಕಾರ ನೀಡಿದೆ.
ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಕಿರಣ್ ರಿಜಿಜು, ಪ್ರಧಾನಿ ನರೇಂದ್ರ ಮೋದಿ ಹಾಗೂ ಜೆ.ಪಿ. ನಡ್ಡಾ ಆಯ್ಕೆ ಮಾಡಿದ ಅಭ್ಯರ್ಥಿಯನ್ನು ಎನ್‌ಡಿಎ ಒಪ್ಪಿಕೊಳ್ಳಲಿದೆ ಎಂದಿದ್ದಾರೆ.
ಇದು ಸರ್ವಾನುಮತದ ನಿರ್ಧಾರವಾಗಿತ್ತು. ನಾವು ಹೆಸರುಗಳನ್ನು ಚರ್ಚಿಸಿಲ್ಲ. ನಾವು ಉಪ ರಾಷ್ಟ್ರಪತಿಯ ಚುನಾವಣಾ ಪ್ರಕ್ರಿಯೆ ಬಗ್ಗೆ ಮಾತ್ರ ಚರ್ಚೆ ನಡೆಸಿದೆವು. ಹೊಸದಿಲ್ಲಿಯ ಸಂಸತ್ ಭವನದಲ್ಲಿ ಎನ್‌ಡಿಎ ನಾಯಕರ ಸಭೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಿಜಿಜು ತಿಳಿಸಿದ್ದಾರೆ.