×
Ad

ತಮಿಳುನಾಡು ಕಾಲ್ತುಳಿತ ಪ್ರಕರಣ | ಮೃತರ ಕುಟುಂಬಕ್ಕೆ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ ನಟ ವಿಜಯ್

Update: 2025-09-28 11:48 IST

Photo credit: PTI

ಚೆನ್ನೈ : ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ತಲಾ 20 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ನೀಡುವುದಾಗಿ ಪಕ್ಷದ ಮುಖ್ಯಸ್ಥ ವಿಜಯ್‌ ಘೋಷಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ನಟ ವಿಜಯ್, "ಇದು ನಿಜಕ್ಕೂ ನಮಗೆ ತುಂಬಲಾರದ ನಷ್ಟ. ಯಾರು ಸಾಂತ್ವನದ ಮಾತುಗಳನ್ನಾಡಿದರೂ ನಮ್ಮ ಪ್ರೀತಿಪಾತ್ರರ ನಷ್ಟವು ಅಸಹನೀಯವಾದುದು. ಆದರೂ, ನಿಮ್ಮ ಕುಟುಂಬದ ಸದಸ್ಯನಾಗಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಕ್ಕೆ 20 ಲಕ್ಷ ರೂಪಾಯಿಗಳನ್ನು ಮತ್ತು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಪ್ರತಿಯೊಬ್ಬ ವ್ಯಕ್ತಿಗೆ 2 ಲಕ್ಷ ರೂಪಾಯಿಗಳನ್ನು ನೀಡಲು ನಾನು ಉದ್ದೇಶಿಸಿದ್ದೇನೆ. ಇಂತಹ ನಷ್ಟದ ಸಂದರ್ಭದಲ್ಲಿ ಈ ಮೊತ್ತವು ಏನೂ ಅಲ್ಲ. ಈ ಸಂದರ್ಭದಲ್ಲಿ ನಿಮ್ಮ ಕುಟುಂಬದ ಸದಸ್ಯನಾಗಿ ನಿಮ್ಮೊಂದಿಗೆ ನಿಲ್ಲುವುದು ನನ್ನ ಕರ್ತವ್ಯವಾಗಿದೆ" ಎಂದು ಹೇಳಿದರು.

ತಮಿಳುನಾಡಿನ ಕರೂರಿನಲ್ಲಿ ಶನಿವಾರ ಸಂಜೆ ವಿಜಯ್ ಅವರ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 10 ಮಕ್ಕಳು, 17 ಮಹಿಳೆಯರು ಸೇರಿದಂತೆ ಕನಿಷ್ಠ 39 ಜನರು ಮೃತಪಟ್ಟಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News