×
Ad

Parliament Budget Session | ಸ್ಪೀಕರ್ ಪದಚ್ಯುತಿಗೆ ಒತ್ತಾಯಿಸುವ ನಿರ್ಣಯದ ಕುರಿತು ಚರ್ಚಿಸಲು ನಾವು ಸಿದ್ಧರಿದ್ದೇವೆ: ಸಚಿವ ಕಿರಣ್ ರಿಜಿಜು

Update: 2026-03-09 14:05 IST

ಕೇಂದ್ರ ಸಚಿವ ಕಿರಣ್ ರಿಜಿಜು (Photo: PTI) 

ಹೊಸದಿಲ್ಲಿ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಿಗೆ ಒತ್ತಾಯಿಸುವ ನಿರ್ಣಯದ ಕುರಿತು ಚರ್ಚಿಸಲು ನಾವು ಸಿದ್ಧರಿದ್ದೇವೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಲಾಪ ಸೋಮವಾರ ಆರಂಭವಾಗಿದೆ. ಓಂ ಬಿರ್ಲಾ ಅವರ ಪದಚ್ಯುತಿಗೆ ಒತ್ತಾಯಿಸುವ ನಿರ್ಣಯ ಸೇರಿದಂತೆ ವಿವಿಧ ನಿಯಮಗಳ ಅಡಿಯಲ್ಲಿ ಎತ್ತಿರುವ ವಿಷಯಗಳ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಪ್ರತಿಪಕ್ಷಗಳು ಒತ್ತಾಯ ಮಾಡಿದೆ.

ಸದನದಲ್ಲಿ ಗದ್ದಲದ ಹಿನ್ನೆಲೆ ಲೋಕಸಭೆ ಕಲಾಪವನ್ನು ಮಧ್ಯಾಹ್ನ 3 ಗಂಟೆಯವರೆಗೆ ಮುಂದೂಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News