×
Ad

West Bengal | ಮತ್ತೋರ್ವ ಬಿಎಲ್ಒ ಆತ್ಮಹತ್ಯೆ

Update: 2026-01-11 20:36 IST

ಕೋಲ್ಕತಾ, ಜ. 11: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಯೊಬ್ಬರ ಮೃತದೇಹ ಮುರ್ಶಿದಾಬಾದ್ ಜಿಲ್ಲೆಯ ಪ್ರಾಥಮಿಕ ಶಾಲೆಯೊಂದರ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಎಸ್ಐಆರ್ ನ ತೀವ್ರ ಕೆಲಸದ ಒತ್ತಡವೇ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾಗಿದೆ ಎಂದು ಅವರ ಕುಟುಂಬ ಆರೋಪಿಸಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ.

ಮೃತಪಟ್ಟ ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ)ಯನ್ನು ಹಮಿಮುಲ್ ಇಸ್ಲಾಂ (47) ಎಂದು ಗುರುತಿಸಲಾಗಿದೆ. ಅವರು ಪೈಕ್ಮಾರಿ ಚಾರ್ ಕೃಷ್ಣಾಪುರ ಬಾಲಕರ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಅವರನ್ನು ಖರಿಬೋನಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೂರ್ವ ಅಲೈಪುರ ಗ್ರಾಮದಲ್ಲಿ ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ)ಯಾಗಿ ನಿಯೋಜಿಸಲಾಗಿತ್ತು ಎಂದು ರಣಿತಾಲ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ರಣಿತಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ಪೈಕ್ಮಾರಿ ಚಾರ್ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಈ ಘಟನೆ ಸ್ಥಳೀಯರ ಗಮನಕ್ಕೆ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಹಮಿಮುಲ್ ಅವರು ಶನಿವಾರ ಬೆಳಗ್ಗೆ ಶಾಲೆಗೆ ತೆರಳಿದ್ದರು. ಆದರೆ ಅಪರಾಹ್ನ ಮನೆಗೆ ಹಿಂದಿರುಗಲಿಲ್ಲ ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ.

‘‘ದೀರ್ಘ ಹುಡುಕಾಟದ ಬಳಿಕ ಶನಿವಾರ ರಾತ್ರಿ ಅವರ ಮೃತದೇಹ ಶಾಲೆಯ ಕೊಠಡಿಯೊಳಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಯಿತು. ನಮ್ಮ ಅಧಿಕಾರಿಗಳು ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ. ತನಿಖೆ ನಡೆಯುತ್ತಿದೆ’’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿಕ್ಷಕ ಹಾಗೂ ಬಿಎಲ್ಒ ಆಗಿ ಎರಡೂ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದುದರಿಂದ ಹಮಿಮುಲ್ ಅವರು ತೀವ್ರ ಕೆಲಸದ ಒತ್ತಡದಲ್ಲಿದ್ದರು ಎಂದು ಕುಟುಂಬದ ಸದಸ್ಯರು ಆರೋಪಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News