×
Ad

ಆರ್‌. ಜಿ. ಕರ್ ಆಸ್ಪತ್ರೆಯಲ್ಲಿ ಹಣಕಾಸು ಅವ್ಯವಹಾರ |ತನಿಖೆಗೆ ಪಶ್ಚಿಮ ಬಂಗಾಳ ಸರಕಾರದಿಂದ ಎಸ್ ಐ ಟಿ ರಚನೆ

Update: 2024-08-20 20:25 IST

ಆರ್‌ ಜಿ ಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ

ಕೋಲ್ಕತ್ತಾ : ಆರ್‌ ಜಿ ಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಹಣಕಾಸು ಅವ್ಯವಹಾರದ ಆರೋಪದ ಕುರಿತಂತೆ ತನಿಖೆ ನಡೆಸಲು ಪಶ್ಚಿಮ ಬಂಗಾಳ ಸರಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ)ವನ್ನು ರೂಪಿಸಿದೆ.

ನಾಲ್ವರು ಸದಸ್ಯರ ಎಸ್‌ ಐ ಟಿ ಯ ನೇತೃತ್ವವನ್ನು ಸ್ವಾಮಿ ವಿವೇಕಾನಂದ ರಾಜ್ಯ ಪೊಲೀಸ್ ಅಕಾಡೆಮಿಯ ಐಜಿ ಡಾ. ಪ್ರಣವ್ ಕುಮಾರ್ ವಹಿಸಲಿದ್ದಾರೆ.

ಪಶ್ಚಿಮ ಬಂಗಾಳದ ಗೃಹ ಇಲಾಖೆ ಆಗಸ್ಟ್ 16ರಂದು ಹೊರಡಿಸಿದ ಅಧಿಸೂಚನೆ ಪ್ರಕಾರ, ತನ್ನ ತನಿಖೆಗೆ ಅಗತ್ಯವಾದರೆ ಸರಕಾರಿ ಇಲಾಖೆಗಳು ಹಾಗೂ ಖಾಸಗಿ ಸಂಸ್ಥೆಗಳಿಂದ ಯಾವುದೇ ದಾಖಲೆಗಳನ್ನು ಪಡೆದುಕೊಳ್ಳುವ ಸ್ವಾತಂತ್ರ್ಯವನ್ನು ಎಸ್‌ ಐ ಟಿ ಹೊಂದಿರಲಿದೆ.

ಒಂದು ತಿಂಗಳ ಒಳಗೆ ವರದಿ ಸಲ್ಲಿಸುವಂತೆ ಪಶ್ಚಿಮ ಬಂಗಾಳ ಸರಕಾರ ಎಸ್ ಐ ಟಿ ಗೆ ಸೂಚಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News