×
Ad

Special Intensive Revision | ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯಿಂದ 58 ಲಕ್ಷ ಹೆಸರು ಡಿಲೀಟ್!

Update: 2025-12-16 13:06 IST

 ಸಾಂದರ್ಭಿಕ ಚಿತ್ರ (PTI)

ಕೊಲ್ಕತ್ತಾ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯಿಂದ 58 ಲಕ್ಷಕ್ಕೂ ಅಧಿಕ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ.

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯಂತೆ, 2026ರ ಕರಡು ಮತದಾರರ ಪಟ್ಟಿಯಿಂದ ಒಟ್ಟು 58,20,898 ಹೆಸರುಗಳನ್ನು ತೆಗೆದುಹಾಕಲಾಗಿದೆ. ಮೃತಪಟ್ಟವರು, ಸ್ಥಳಾಂತರಗೊಂಡವರು, ನಕಲಿ ನೋಂದಣಿ, ಕಾಣೆಯಾಗಿರುವುದು ಸೇರಿದಂತೆ ಇತರ ಕಾರಣಗಳ ಹಿನ್ನೆಲೆಯಲ್ಲಿ ಹೆಸರುಗಳನ್ನು ಅಳಿಸಲಾಗಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.

2026ರ ಕರಡು ಪಟ್ಟಿಯನ್ನು ಪ್ರಕಟಿಸಿದ ಬಳಿಕ, ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಳಿಸಲಾದ ಹೆಸರುಗಳಿಗೆ ಸಂಬಂಧಿಸಿ ಆಕ್ಷೇಪಣೆ ಹೊಂದಿರುವ ಅಥವಾ ತಮ್ಮ ಹೆಸರು ತಪ್ಪಾಗಿ ಕೈಬಿಟ್ಟಿದೆ ಎಂದು ಭಾವಿಸುವ ಮತದಾರರು ನಮೂನೆ–6ರಲ್ಲಿ ಘೋಷಣಾ ನಮೂನೆ ಹಾಗೂ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಆಯೋಗ ತಿಳಿಸಿದೆ.

ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕವನ್ನು 2026ರ ಜನವರಿ 15 ಎಂದು ನಿಗದಿಪಡಿಸಲಾಗಿದೆ. ಈ ಅವಧಿ ಮುಗಿದ ಬಳಿಕ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News