×
Ad

ಪಶ್ಚಿಮ ಬಂಗಾಳ: ಆಸ್ಪತ್ರೆಗಳ ಭದ್ರತಾ ಮೇಲ್ವಿಚಾರಣೆಗೆ ನಿವೃತ್ತ ಸೇನಾ, ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧತೆ

Update: 2024-08-21 15:04 IST

PC : X

ಕೊಲ್ಕತ್ತಾ: ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಂತರ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ವೈದ್ಯರು ತಮ್ಮ ಭದ್ರತೆಗಾಗಿ ಪ್ರತಿಭಟನೆಗಳನ್ನು ನಡೆಸುತ್ತಿರುವ ನಡುವೆ, ಪಶ್ಚಿಮ ಬಂಗಾಳ ಪೊಲೀಸ್‌ ಇಲಾಖೆ ರಾಜ್ಯ ಸರ್ಕಾರದ ನಿಯಂತ್ರಣದಲ್ಲಿರುವ ಆಸ್ಪತ್ರೆಗಳ ಸಂಪೂರ್ಣ ಭದ್ರತಾ ವ್ಯವಸ್ಥೆಯನ್ನು ಮೇಲ್ವಿಚಾರಣೆ ಮಾಡಲು ನಿವೃತ್ತ ಪೊಲೀಸ್ ಅಧಿಕಾರಿಗಳು ಮತ್ತು ನಿವೃತ್ತ ಸೇನಾ, ನೌಕಾಪಡೆ ಮತ್ತು ವಾಯುಪಡೆಯ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಸಿದ್ಧತೆಗಳನ್ನು ಪ್ರಾರಂಭಿಸಿದೆ ಎಂದು ವರದಿಯಾಗಿದೆ.

ಆಗಸ್ಟ್ 20 ರಂದು, ರಾಜ್ಯ ಪೊಲೀಸರು ಎಲ್ಲಾ ಪೊಲೀಸ್ ಕಮಿಷನರ್‌ಗಳು (CPs) ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ (SPs) ಕಳೆದ ಎರಡು ವರ್ಷಗಳಲ್ಲಿ ನಿವೃತ್ತಿ ಹೊಂದಿರುವ, ದೈಹಿಕವಾಗಿ ಸದೃಢರಾಗಿರುವ ಮತ್ತು ಕೆಲಸ ಮಾಡಲು ಸಿದ್ಧರಿರುವ ಅಧಿಕಾರಿಗಳ ಪಟ್ಟಿಯನ್ನು ಮಾಡಲು ಆದೇಶಿಸಲಾಗಿದೆ.

ಸೇವೆಗೆ ಸಿದ್ಧರಿರುವ ಅಧಿಕಾರಿಗಳ ಪಟ್ಟಿಯನ್ನು ಆಗಸ್ಟ್ 24 ರೊಳಗೆ ರಾಜ್ಯ ಪೊಲೀಸ್ ಪ್ರಧಾನ ಕಚೇರಿಗೆ ಕಳುಹಿಸಬೇಕು ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News