×
Ad

ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ: “ಉಗ್ರರನ್ನು ಅವರ ನೆಲದಲ್ಲೇ ಹೊಡೆದುರುಳಿಸುತ್ತೇವೆ” ಎಂಬ ಮೋದಿ, ರಾಜನಾಥ್‌ ಸಿಂಗ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅಮೆರಿಕ

Update: 2024-04-17 12:15 IST

 ರಾಜನಾಥ್‌ ಸಿಂಗ್‌ , ನರೇಂದ್ರ ಮೋದಿ | PC : PTI 

ಹೊಸದಿಲ್ಲಿ: ಉಗ್ರರನ್ನು ಅವರ ಮನೆಗಳಲ್ಲಿ ಹತ್ಯೆಗೈಯ್ಯಲು ಭಾರತ ಹಿಂಜರಿಯವುದಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ಇತ್ತೀಚಿನ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಅಮೆರಿಕಾದ ಸ್ಟೇಟ್‌ ಡಿಪಾರ್ಟ್‌ಮೆಂಟ್‌ ವಕ್ತಾರ ಮ್ಯಾಥ್ಯೂ ಮಿಲ್ಲರ್‌, “ಈ ವಿಚಾರದಲ್ಲಿ ಅಮೆರಿಕ ಮಧ್ಯ ಪ್ರವೇಶಿಸುವುದಿಲ್ಲ ಆದರೆ ಭಾರತ ಮತ್ತು ಪಾಕಿಸ್ತಾನಕ್ಕೆ ಪರಿಸ್ಥಿತಿ ಬಿಗಡಾಯಿಸದಂತೆ ನೋಡಿಕೊಳ್ಳಲು ಹಾಗೂ ಮಾತುಕತೆಗಳ ಮೂಲಕ ಪರಿಹಾರ ಕಂಡುಕೊಳ್ಳಲು ಅಮೆರಿಕ ಪ್ರೋತ್ಸಾಹಿಸಿದೆ ಎಂದಿದ್ದಾರೆ.

ಖಾಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಹತ್ಯೆ ಸಂಚಿಗೆ ಸಂಬಂಧಿಸಿದಂತೆ ಭಾರತದ ಮೇಲೆ ನಿರ್ಬಂಧಗಳನ್ನು ಏಕೆ ಹೇರಲಾಗಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಯಾವುದೇ ನಿರ್ಬಂಧ ಕ್ರಮಗಳನ್ನು ಮುಂಚಿತವಾಗಿ ಪೂರ್ವವೀಕ್ಷಣೆ ಮಾಡುವುದಿಲ್ಲ, ಹಾಗೆಂದ ಮಾತ್ರಕ್ಕೆ ನಿರ್ಬಂಧಗಳನ್ನು ಹೇರಲಾಗದು ಎನ್ನಲಾಗದು, ನಿರ್ಬಂಧ ಕ್ರಮಗಳ ಕುರಿತಂತೆ ಬಹಿರಂಗವಾಗಿ ಅಮೆರಿಕ ಚರ್ಚಿಸುವುದಿಲ್ಲ ಎಂದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News