×
Ad

ಜನರ ಬಯಕೆಯನ್ನು ಪೂರೈಸಲು ಸರಿಯಾದ ಸಮಯಕ್ಕೆ ಕಾಯುತ್ತೇವೆ : ಮಲ್ಲಿಕಾರ್ಜುನ ಖರ್ಗೆ

Update: 2024-06-05 22:32 IST

PC : PTI 

ಹೊಸದಿಲ್ಲಿ: ಬಿಜೆಪಿಯೇತರ ಸರಕಾರದ ಬಯಸಿದ್ದ ಜನರ ಬಯಕೆಯನ್ನು ಪೂರೈಸಲು ಸರಿಯಾದ ಸಮಯಕ್ಕೆ ಕಾಯುತ್ತೇವೆ ಎಂದು ತಮ್ಮ ನಿವಾಸದಲ್ಲಿ ಮುಕ್ತಾಯಗೊಂಡ ವಿರೋಧ ಪಕ್ಷಗಳ ನಾಯಕರ ಸಭೆಯ ನಂತರ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದ್ದಾರೆ.

ಈ ನಿರ್ಧಾರವನ್ನು ಇಂಡಿಯಾ ಮೈತ್ರಿಕೂಟದ ಎಲ್ಲ ಅಂಗಪಕ್ಷಗಳೂ ಸರ್ವಾನುಮತದಿಂದ ಅಂಗೀಕರಿಸಿವೆ ಎಂದು ಅವರು ತಿಳಿಸಿದ್ದಾರೆ.

ತಮ್ಮ ನಿವಾಸದಲ್ಲಿ ನಡೆದ ಸುದೀರ್ಘ ಎರಡು ಗಂಟೆಯ ಕಾಲದ ಸಭೆ ಮುಕ್ತಾಯಗೊಂಡ ನಂತರ, ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಸದ್ಯ ಇಂಡಿಯಾ ಮೈತ್ರಿಕೂಟವು ಸರಕಾರ ರಚನೆಗೆ ತನ್ನ ಹಕ್ಕು ಪ್ರತಿಪಾದಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ಫ್ಯಾಸಿಸ್ಟ್ ಆಡಳಿತದ ವಿರುದ್ಧದ ಹೋರಾಟವನ್ನು ಮುಂದುವರಿಸುವ ನಿರ್ಧಾರಕ್ಕೆ ವಿರೋಧ ಪಕ್ಷಗಳ ನಾಯಕರು ಬಂದಿದ್ದಾರೆ ಎಂದೂ ಅವರು ಹೇಳಿದ್ದಾರೆ. ಇದರೊಂದಿಗೆ ಇಂಡಿಯಾ ಮೈತ್ರಿಕೂಟಕ್ಕೆ ನಿರೀಕ್ಷೆಗೂ ಮೀರಿ ಬೆಂಬಲ ನೀಡಿದ ಜನತೆಗೆ ಅವರು ಧನ್ಯವಾದಗಳನ್ನು ಸಲ್ಲಿಸಿದರು.

ವಿರೋಧ ಪಕ್ಷಗಳು ಒಗ್ಗಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸಲಿದ್ದು, ನಾವು ಜನರಿಗೆ ನೀಡಿದ್ದ ಭರವಸೆಗಳ ಪರ ನಿಲ್ಲಲಿದ್ದೇವೆ ಹಾಗೂ ಅವಕ್ಕೆ ಬದ್ಧವಾಗಿ ಉಳಿಯಲಿದ್ದೇವೆ ಎಂದೂ ಖರ್ಗೆ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News